ಅರುಣಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಪೆಮಾ ಖಂಡು ಪ್ರಮಾಣ ವಚನ ಸ್ವೀಕಾರ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಜೆಪಿ ನಾಯಕ ಪೆಮಾ ಖಂಡು ಅವರು ಅರುಣಾಚಲ ಪ್ರದೇಶದ ಮುಖ್ಯಮಂತ್ರಿಯಾಗಿ ಸತತ ಮೂರನೇ ಅವಧಿಗೆ ಗುರುವಾರ ಪ್ರಮಾಣ ವಚನ ಸ್ವೀಕರಿಸಿದರು.

ಇಟಾನಗರದಲ್ಲಿರುವ ಡಿಕೆ ರಾಜ್ಯ ಸಮಾವೇಶ ಕೇಂದ್ರದಲ್ಲಿ ನಡೆದ ಪ್ರಮಾಣ ವಚನ ಸಮಾರಂಭದಲ್ಲಿ ಕೇಂದ್ರ ಸಚಿವರಾದ ಅಮಿತ್ ಶಾ, ಜೆಪಿ ನಡ್ಡಾ, ಕಿರಣ್ ರಿಜಿಜು ಮತ್ತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಉಪಸ್ಥಿತರಿದ್ದರು.

60 ಸದಸ್ಯ ಬಲದ ಅರುಣಾಚಲ ಪ್ರದೇಶ ವಿಧಾನಸಭೆಯಲ್ಲಿ ಲೋಕಸಭೆ ಚುನಾವಣೆಯ ಜತೆಗೇ ನಡೆದ ಚುನಾವಣೆಯಲ್ಲಿ ಬಿಜೆಪಿ 46 ಸ್ಥಾನಗಳನ್ನು ಗೆದ್ದುಕೊಂಡಿದೆ. ಚುನಾವಣೆಗೂ ಮುನ್ನ ರಾಜ್ಯದಲ್ಲಿ ಬಿಜೆಪಿ ಹತ್ತು ಸ್ಥಾನಗಳನ್ನು ಅವಿರೋಧವಾಗಿ ಗೆದ್ದಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!