ಹೊಸದಿಗಂತ ಡಿಜಿಟಲ್ ಡೆಸ್ಕ್:
ಪತ್ನಿ ನಾಗರತ್ನ ವಿರುದ್ಧ ವಿಚ್ಚೇದನ ಕೋರಿ ನಟ ದುನಿಯಾ ವಿಜಯ್ ಸಲ್ಲಿಸಿದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.
ಬೆಂಗಳೂರಿನ ಶಾಂತಿನಗರದ ಕುಟುಂಬಿಕ ನ್ಯಾಯಾಲಯ ನಟ ದುನಿಯಾ ವಿಜಯ್ ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.
ಕ್ರೌರ್ಯದ ಆಧಾರದಲ್ಲಿ ನಟ ದುನಿಯಾ ವಿಜಯ್ ಅರ್ಜಿ ಸಲ್ಲಿಸಿದ್ದರು. ಪತ್ನಿ ನಾಗರತ್ನ ವಿರುದ್ಧ ಆರೋಪಗಳನ್ನು ಸಾಬೀತುಪಡಿಸುವಲ್ಲಿ ವಿಫಲವಾದ ಹಿನ್ನೆಲೆ ನಟ ದುನಿಯಾ ವಿಜಯ್ ಅರ್ಜಿ ವಜಾಗೊಳಿಸಿ ಕೋರ್ಟ್ ಆದೇಶ ಹೊರಡಿಸಿದೆ.
ದುನಿಯಾ ವಿಜಯ್ ಮೊದಲ ಪತ್ನಿ ನಾಗರತ್ನ ಅವರಿಂದ ವಿಜಯ್ ದೂರವಾಗಿದ್ದಾರೆ. ಸದ್ಯ ಕೀರ್ತಿ ಗೌಡ ಅವರೊಂದಿಗೆ ದಾಂಪತ್ಯ ಜೀವನ ಮುಂದುವರಿಸಿದ್ದಾರೆ. ಆದರೆ ಈವರೆಗೂ ವಿಜಯ್ ಹಾಗೂ ನಾಗರತ್ನ ಡಿವೋರ್ಸ್ ಪಡೆದಿರಲಿಲ್ಲ.
ದುನಿಯಾ ವಿಜಯ್ ಹಾಗೂ ನಾಗರತ್ನ ಮಧ್ಯೆ ವೈಮನಸ್ಸು ಮೂಡಿದ ಹಿನ್ನೆಲೆ 2018ರಲ್ಲಿ ವಿಜಯ್ ಅವರು ವಿಚ್ಛೇದನ ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದರು.