ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದಲ್ಲಿನ ಪರಿಸ್ಥಿತಿಯನ್ನು ನಿಭಾಯಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಪರಿಶೀಲನಾ ಸಭೆ ನಡೆಸಿದ ಕಲವೇ ಗಂಟೆಗಳಲ್ಲಿ ರಿಯಾಸಿ ಬಸ್ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಪೊಲೀಸರು 50 ಮಂದಿ ಸ್ಥಳೀಯರನ್ನು ವಶಕ್ಕೆ ಪಡೆದಿದ್ದಾರೆ.
1995 ಮತ್ತು 2005 ನಡುವೆ ರಿಯಾಸಿ ಜಿಲ್ಲೆಯ ಜಿಲ್ಲೆಯ ಅರ್ನಾಸ್ ಮತ್ತು ಮಹೋರ್ ಪ್ರದೇಶಗಳು ಉಗ್ರರಿಗೆ ಸುರಕ್ಷಿತ ತಾಣವಾಗಿತ್ತು. ಹೀಗಾಗಿ 50 ಮಂದಿಯನ್ನು ವಶ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ರಿಯಾಸಿ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಸುಳಿವು ಸಿಕ್ಕಿದೆ ಎಂದು ಪೊಲೀಸರು ಹೇಳಿದ್ದಾರೆ.