ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿತ್ರದುರ್ಗದ ರೇಣುಕಾಸ್ವಾಮಿ ಮರ್ಡರ್ ಕೇಸ್ಗೆ ಸಂಬಂಧಿಸಿದಂತೆ ದರ್ಶನ್ ವಿಚಾರಣೆ ನಡೆಸುತ್ತಿರುವ ಠಾಣೆಗೆ ಶಾಮೀಯಾನ ಹಾಕಿಸಲಾಗಿದೆ. ಈ ಬಗ್ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬಂದಮೇಲೆ ಕೊಲೆಗಡುಕರಿಗೆ ಭಯ ಇಲ್ಲದಂತಾಗಿದೆ. ನಟ ದರ್ಶನ್ ಕಾಂಗ್ರೆಸ್ ಪರ ಚುನಾವಣೆಯಲ್ಲಿ ಕೆಲಸ ಮಾಡಿದರು ಎಂದು ಅವರನ್ನು ಶಾಮಿಯಾನ ಹಾಕಿ ರಕ್ಷಣೆ ಮಾಡುತ್ತಿದ್ದಾರಾ?
ದರ್ಶನ್ ಇರುವ ಠಾಣೆಗೆ ರಕ್ಷಣೆ ಕೊಡಲಾಗಿದೆ. ಜನರಿಗೊಂದು ಕಾನೂನು, ದೊಡ್ಡವರಿಗೊಂದು ಕಾನೂನು, ಕಾಂಗ್ರೆಸ್ ಕಾರ್ಯಕರ್ತರಿಗೊಂದು ಕಾನೂನು ಎಂಬ ಸಂದೇಶವನ್ನು ಸರ್ಕಾರ ರವಾನಿಸಿದೆ ಎಂದರು.