ಹೊಸದಿಗಂತ ಡಿಜಿಟಲ್ ಡೆಸ್ಕ್:
ಜಾಹೀರಾತಿಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿರುದ್ಧ ಸುಳ್ಳು ದೂರು ದಾಖಲಿಸುವುದರ ಹಿಂದಿನ ನೀತಿ ಏನು? ಬಿಜೆಪಿ ನಾಯಕರಿಗೆ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ಯಡಿಯೂರಪ್ಪ ಅವರ ವಿಚಾರಣೆ ದ್ವೇಷ ರಾಜಕಾರಣ ಎಂಬ ಬಿಜೆಪಿ ಹೇಳಿಕೆಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ರಾಹುಲ್ ಗಾಂಧಿ ಆಗಮನದ ನಂತರ, ಪ್ರಕರಣದ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಬಂದಿಲ್ಲ. ಕಾಂಗ್ರೆಸ್ ಪಕ್ಷ ಯಾರನ್ನೂ ದ್ವೇಷಿಸುವುದಿಲ್ಲ.ದ್ವೇಷ ರಾಜಕಾರಣದ ಬಗ್ಗೆ ನಾನು ಮಾತನಾಡಿದರೆ ವಿಚಾರ ಎಲ್ಲೆಲ್ಲೋ ಹೋಗುತ್ತದೆ.
ಈ ವಿಚಾರದಲ್ಲಿ ನನಗೂ ಅಯ್ಯೋ ಎನಿಸುತ್ತದೆ. ಇಂತಹ ಕಠಿಣ ಪರಿಸ್ಥಿತಿಯನ್ನು ನಾವು ಅನುಭವಿಸಿದ್ದೇವೆ. ರಾಹುಲ್ ಗಾಂಧಿ ಅವರು ಬೆಂಗಳೂರಿಗೆ ಬಂದು ನ್ಯಾಯಾಲಯದ ಮುಂದೆ ಹಾಜರಾದರು. ಅವರ ವಿರುದ್ಧ ಕೇಸು ಹಾಕಿರುವುದು ಯಾವ ರಾಜಕಾರಣ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.