ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಮನಗರ ಹೊರವಲಯದ ಕಪನಯ್ಯನದೊಡ್ಡಿ ಬಳಿಯ ಎಕ್ಸ್ಪ್ರೆಸ್ ವೇನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ದಾರುಣ ಅಂತ್ಯ ಕಂಡಿದ್ದಾರೆ.
ಆಂಧ್ರ ಮೂಲದ ವಿಶ್ವ (21) ಮತ್ತು ಸೂರ್ಯ (21) ಎಂಬ ವಿದ್ಯಾರ್ಥಿಗಳು ಬೆಂಗಳೂರಿನ ವಿದ್ಯಾರಣ್ಯಪುರದ ಎಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದರು. ಮೈಸೂರಿನಿಂದ ಬೆಂಗಳೂರಿಗೆ ತೆರಳುವಾಗ ತಡರಾತ್ರಿ ಅಪಘಾತ ಸಂಭವಿಸಿ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದಲ್ಲಿ ಕಾರು ಚಾಲಕನಿಗೆ ಗಂಭೀರ ಗಾಯವಾಗಿದೆ. ಡಿಕ್ಕಿ ರಭಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಲಾರಿ ಮುಂಭಾಗ ಜಖಂಗೊಂಡಿದೆ.