ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಇಡೀ ರಾಜ್ಯದಲ್ಲಿ ಸಂಚಲನ ಮೂಡಿಸಿದೆ. ಕನ್ನಡ ಚಿತ್ರರಂಗದ ಸ್ಟಾರ್ ಆಕ್ಟರ್ ಮರ್ಡರ್‌ನಲ್ಲಿ ಶಾಮೀಲಾಗಿರುವ ಕಾರಣ ಇಂದು ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ರೇಣುಕಾಸ್ವಾಮಿ ಮನೆಗೆ ಭೇಟಿ ನೀಡಲಿದೆ.
ಹತ್ಯೆ ಪ್ರಕರಣದ ಬಳಿಕ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಗೆ ಮುಜುಗರವಾಗಿದೆ. ನಟ ದರ್ಶನ್ ಕೃತ್ಯವನ್ನು ಖಂಡಿಸಿರುವ ಚಲನಚಿತ್ರ ವಾಣಿಜ್ಯ ಮಂಡಳಿ ಇಂದು ಹತ್ಯೆಯಾದ ರೇಣುಕಾಸ್ವಾಮಿ ಕುಟುಂಬಕ್ಕೆ ಭೇಟಿ ನೀಡಿ ಸ್ವಾಂತನ ಹೇಳಲಿದೆ.
ಸಾರಾ ಗೋವಿಂದು, ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್, ವಾಣಿಜ್ಯ ಮಂಡಳಿ ಅಧ್ಯಕ್ಷ ಸುರೇಶ್ ಸೇರಿದಂತೆ 15ಕ್ಕೂ ಹೆಚ್ಚು ಸದಸ್ಯರು ರೇಣುಕಾಸ್ವಾಮಿ ಮನೆಗೆ ಭೇಟಿ ನೀಡಲಿದ್ದಾರೆ. ಬಳಿಕ ಸುದ್ದಿಗೋಷ್ಠಿ ನಡೆಸುವ ಸಾಧ್ಯತೆಯಿದೆ.