ತಿರುಪತಿ ತಿಮ್ಮಪ್ಪನ ದರುಶನ ಪಡೆದ ಕುಮಾರಸ್ವಾಮಿ, ವಿಶೇಷ ಪೂಜೆ ಸಲ್ಲಿಕೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ತಿರುಪತಿ ವೆಂಕಟೇಶ್ವರ ದೇವಸ್ಥಾನಕ್ಕೆ ತೆರಳಿ ದೇವರ ದರುಶನ ಪಡೆದರು.

ಕುಮಾರಸ್ವಾಮಿ ಅವರು ಇಂದು ಬೆಳಗ್ಗೆ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ಸುಪ್ರಭಾತ ಸೇವೆ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ನನ್ನ ಮೇಲೆ ಬಹುದೊಡ್ಡ ಜವಾಬ್ದಾರಿಯನ್ನು ವಹಿಸಿದ್ದಾರೆ. ಕೇಂದ್ರ ಸರ್ಕಾರದ ಸಚಿವನಾಗಿ ನನ್ನ ಕೆಲಸ ಯಶಸ್ವಿಯಾಗಲಿ ಎಂದು ವೆಂಕಟೇಶ್ವರನ ಆಶೀರ್ವಾದ ಪಡೆಯಲು ಬಂದಿದ್ದೇನೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!