ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ವಿಧಾನಸಭೆ ಚುನಾವಣೆಯಲ್ಲಿ ಚನ್ನಪಟ್ಟಣ ಕ್ಷೇತ್ರದಿಂದ ಸ್ಪರ್ಧಿಸಿ ಗೆಲವು ಸಾಧಿಸಿ ಇದೀಗ, ಸಂಸರಾದ ಬಳಿಕ ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾಗಿ ಅಧಿಕಾರ ವಹಿಸಿಕೊಂಡಿರುವ ಜೆಡಿಎಸ್ ನಾಯಕ ಹೆಚ್ಡಿ ಕುಮಾರಸ್ವಾಮಿ ಇಂದು ಬೆಳಗ್ಗೆ ತಿರುಪತಿಗೆ ಭೇಟಿ ನೀಡಿ ತಿಮ್ಮಪ್ಪನ ದರ್ಶನ ಪಡೆದಿದ್ದು, ಅಲ್ಲಿಂದ ಬಂದು ರಾಜೀನಾಮೆ ನೀಡಿದ್ದಾರೆ.