ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರ ಅಧಿಕೃತ ಬಂಗಲೆ ಬಳಿಯ ಕಟ್ಟಡ ಸಂಕೀರ್ಣದ ಅಗ್ನಿ ಅವಘಡ ಸಂಭವಿಸಿದೆ.
ಈ ಕಟ್ಟಡವು ಬಿರೇನ್ ಸಿಂಗ್ ಅವರ ಅಧಿಕೃತ ಬಂಗಲೆಯಿಂದ ಕೇವಲ 100 ಮೀಟರ್ ದೂರದಲ್ಲಿದೆ. ನಾಲ್ಕು ಅಗ್ನಿಶಾಮಕ ವಾಹನಗಳ ಸಹಾಯದಿಂದ ಬೆಂಕಿಯನ್ನು ನಂದಿಸಲಾಗಿದೆ. ಘಟನೆಯಲ್ಲಿ ಸಾವು ನೋವುಗಳ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ. ಅಗ್ನಿ ಅವಘಡಕ್ಕೆ ಕಾರಣವೇನು ಎಂಬುದನ್ನು ಪರಿಶೀಲಿಸುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.