ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಮರ್ಡರ್ ವಿಚಾರವಾಗಿ ಸೆಲೆಬ್ರಿಟಿಗಳು ಪರ-ವಿರೋಧ ಮಾತನಾಡಿದ್ದು, ಇದೀಗ ನಟ ಉಪೇಂದ್ರ ಮೌನಮುರಿದಿದ್ದಾರೆ.
ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ದರ್ಶನ್ ಬಂಧನ, ರೇಣುಕಾ ಸ್ವಾಮಿ ಕೊಲೆ ಪ್ರಕರಣ ಮತ್ತು ಅದರ ವಿಚಾರಣೆ ಇಡೀ ಕರ್ನಾಟಕ ಮಾತ್ರವಲ್ಲ ಇಡೀ ಭಾರತವೇ ಬೆರಗಾಗಿ ನೋಡುತ್ತಿದೆ. ಈ ಹೈ ಪ್ರೊಫೈಲ್ ಕೇಸ್ನ ವಿಚಾರಣೆಯಲ್ಲಿ ನಿಷ್ಪಕ್ಷವಾದ ನಿರ್ಣಯ ಮತ್ತು ನ್ಯಾಯಕ್ಕಾಗಿ ಕಾಯುತ್ತಿದ್ದಾರೆ. ರೇಣುಕಾ ಸ್ವಾಮಿ ಕುಟುಂಬದಲ್ಲಿ, ಜನರಲ್ಲಿ, ಟಿವಿ ಮಾಧ್ಯಮಗಳಲ್ಲಿ ಮತ್ತು ದರ್ಶನ್ ಅಭಿಮಾನಿಗಳಲ್ಲಿ ಏನೇನೋ ಆತಂಕ, ಅನುಮಾನಗಳು ಕಾಡುತ್ತಿದೆ, ಊಹಾಪೋಹಗಳು ಹುಟ್ಟಿಕೊಳ್ಳುತ್ತಿದೆ’ ಎಂದು ಪೋಸ್ಟ್ ಆರಂಭಿಸಿದ್ದಾರೆ.
ಯಾವುದೇ ಕೇಸ್ ಆದರೂ ಆ ಕೇಸ್ನ ವಿಚಾರಣೆಯ ವೀಡಿಯೋ ದಾಖಲೆಗಳನ್ನು ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಆಗಾಗ ಪೋಲೀಸರು ಸಂಬಂಧಪಟ್ಟ ವ್ಯಕ್ತಿಗಳ ಕುಟುಂಬದವರ ಜೊತೆ ಹಂಚಿಕೊಳ್ಳಬೇಕು ಮತ್ತು ಅದು ಕಾನೂನಾಗಬೇಕು. ಹಿಂದೆಲ್ಲಾ ಪೊಲೀಸರು ವಿಚಾರಣೆಯ ವಿವರ ಬರೆದು ದಾಖಲಿಸುತ್ತಿದ್ದರು ಈಗ ತಂತ್ರಜ್ಞಾನ ಇಷ್ಟೊಂದು ಮುಂದುವರೆದಿದ್ದು ಎಲ್ಲವನ್ನೂ ವೀಡಿಯೋ ರೆಕಾರ್ಡ್ ಮತ್ತು ಲೈವ್ ಸ್ಟ್ರೀಮಿಂಗ್ ಮಾಡಬಹುದು ಎಂದು ಸಲಹೆ ನೀಡಿದ್ದಾರೆ.
ದರ್ಶನ್ – ರೇಣುಕಾ ಸ್ವಾಮಿ – ಪಾರದರ್ಶಕ ವಿಚಾರಣೆ …..
ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ದರ್ಶನ್ ಬಂಧನ ರೇಣುಕಾ ಸ್ವಾಮಿ ಕೊಲೆ ಪ್ರಕರಣ ಮತ್ತು ಅದರ ವಿಚಾರಣೆ ಇಡೀ ಕರ್ನಾಟಕ ಮಾತ್ರವಲ್ಲ ಇಡೀ ಭಾರತವೇ ಭೆರಗಾಗಿ ನೋಡುತ್ತಿದೆ.
ಈ ಹೈ ಪ್ರೊಫೈಲ್ ಕೇಸ್ ನ ವಿಚಾರಣೆಯಲ್ಲಿ ನಿಶ್ಪಕ್ಷಪಾತವಾದ ನಿರ್ಣಯ ಮತ್ತು ನ್ಯಾಯಕ್ಕಾಗಿ ಕಾಯುತ್ತಿದ್ದಾರೆ.…— Upendra (@nimmaupendra) June 17, 2024
ತಪ್ಪು ಸರ್. ಬೇಡ. ಅದು ಬೇರೆ ದಾರಿಯನ್ನು ಹಿಡಿಯುತ್ತೆ