ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸ್ ವಶದಲ್ಲಿರುವ ನಟ ದರ್ಶನ್ ಬಿಡುಗಡೆಯಾಗಲಿ ಎಂದು ಅವರ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.
ಇತ್ತ ರಾಯಚೂರಿನ ಅಭಿಮಾನಿಗಳು ಒಂದು ಹೆಜ್ಜೆ ಮುಂದೆ ಹೋಗಿ ಪಾದಯಾತ್ರೆ ಮಾಡಿದ್ದಾರೆ.
ರಾಯಚೂರಿನಿಂದ ಪಾದಯಾತ್ರೆ ಮೂಲಕ ಬಂದು ಲಿಂಗಸುಗೂರು ತಾಲ್ಲೂಕಿನ ಗುರಗುಂಟಾ ಅಮರೇಶ್ವರ ದೇವಸ್ಥಾನದಲ್ಲಿ ದರ್ಶನ್ ಫೋಟೋ ಹಿಡಿದು ಪೂಜೆ ಮಾಡಿಸಿದ್ದಾರೆ.
ತಾಲೂಕಿನ ಯರಡೋಣಿ ಗ್ರಾಮದ ದರ್ಶನ್ ಅಭಿಮಾನಿಗಳ ಸಂಘದ ಪದಾಧಿಕಾರಿಗಳು ಸುಮಾರು 8 ಕಿಮೀ ಪಾದಯಾತ್ರೆ ಮೂಲಕ ದೇಗುಲಕ್ಕೆ ಬಂದು ಪ್ರಾರ್ಥನೆ ಮಾಡಿದ್ದಾರೆ.