ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ-1 ಆರೋಪಿ ಪವಿತ್ರಾ ಗೌಡ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಗೆ ಆಗಮಿಸಿದ ವೈದ್ಯರ ತಂಡ ವೈದ್ಯಕೀಯ ತಪಾಸಣೆ ನಡೆಸಿ ನಂತರ ಆಸ್ಪತ್ರೆಗೆ ದಾಖಲು ಮಾಡಲು ಸೂಚನೆ ನೀಡಿದರು. ಹೀಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಇನ್ನೂ, ನಟ ದರ್ಶನ್ ಮತ್ತು ಸಹಚರರಿಂದ ನಡೆದ ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು ಪೊಲೀಸರು ತೀವ್ರಗೊಳಿಸಿದ್ದಾರೆ. ಎ1 ಆರೋಪಿ ಪವಿತ್ರಾ ಗೌಡ ಮನೆಯಲ್ಲಿ ಸಾಕ್ಷ್ಯಕ್ಕಾಗಿ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮಹತ್ವದ ಸಾಕ್ಷಿಗಳು ಲಭ್ಯವಾಗಿವೆ.