ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಹಾರದ ರಾಜ್ಗಿರ್ನಲ್ಲಿ ನಳಂದ ವಿಶ್ವವಿದ್ಯಾಲಯದ ಹೊಸ ಕ್ಯಾಂಪಸ್ ಅನ್ನು ಉದ್ಘಾಟಿಸುವ ಮೊದಲು, ಪ್ರಧಾನಿ ನರೇಂದ್ರ ಮೋದಿ ಅವರು ಐತಿಹಾಸಿಕ ನಳಂದ ವಿಶ್ವವಿದ್ಯಾಲಯದ ಅವಶೇಷಗಳ ಸ್ಥಳಕ್ಕೆ ಭೇಟಿ ನೀಡಿದರು.
ಸುಮಾರು 1600 ವರ್ಷಗಳ ಹಿಂದೆ ಸ್ಥಾಪಿತವಾದ ಪ್ರಾಚೀನ ನಳಂದ ವಿಶ್ವವಿದ್ಯಾನಿಲಯವು ವಿಶ್ವದ ಮೊದಲ ವಸತಿ ವಿಶ್ವವಿದ್ಯಾಲಯಗಳಲ್ಲಿ ಒಂದಾಗಿದೆ. ಹೊಸ ವಿಶ್ವವಿದ್ಯಾನಿಲಯ ಕ್ಯಾಂಪಸ್ ಅನ್ನು ಐತಿಹಾಸಿಕ ನಳಂದ ವಿಶ್ವವಿದ್ಯಾಲಯದ ಪ್ರತಿರೂಪವಾಗಿ ರಚಿಸಲಾಗಿದೆ.
ಇಂದು ಬೆಳಿಗ್ಗೆ ಎಕ್ಸ್ನಲ್ಲಿ ಮೋದಿ, ನಮ್ಮ ಶಿಕ್ಷಣ ಕ್ಷೇತ್ರಕ್ಕೆ ಇದು ಬಹಳ ವಿಶೇಷವಾದ ದಿನ. ಇಂದು ರಾಜ್ಗಿರ್ನಲ್ಲಿ ನಳಂದ ವಿಶ್ವವಿದ್ಯಾಲಯದ ಹೊಸ ಕ್ಯಾಂಪಸ್ ಉದ್ಘಾಟನೆಯಾಗಲಿದೆ ಎಂದು ತಿಳಿಸಿದ್ದಾರೆ.