ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಡವರ ಪರ ಕೆಲಸ ಮಾಡದಿದ್ದರೆ ನೀವೆಲ್ಲಾ ಅನರ್ಹರು ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಆಶ್ರಮ ಶಾಲೆಯ ಮಕ್ಕಳು, ಆರ್ಥಿಕ ಹಿಂದುಳಿದವರು, ದಲಿತ ಮಕ್ಕಳ ಶಿಕ್ಷಣಕ್ಕಾಗಿ ಕೆಲಸ ಮಾಡದ ಅಧಿಕಾರಿಗಳು ಸೇವೆಯಲ್ಲಿರಲು ಅನರ್ಹರು. ಆಶ್ರಮ ಶಾಲೆಯ ಮಕ್ಕಳು, ಬಡವರು, ದಲಿತ ಮಕ್ಕಳ ಶಿಕ್ಷಣದ ಬಗ್ಗೆ ನಿರ್ಲಕ್ಷ್ಯಕ್ಕೆ ಗರಂ ಆಗಿ ಅಧಿಕಾರಿಗಳನ್ನು ತೀವ್ರವಾಗಿ ಸಿಎಂ ತರಾಟೆಗೆ ತೆಗೆದುಕೊಂಡರು. ಅಲ್ಲದೇ ಆಶ್ರಮ ಶಾಲೆಗಳಿಗೆ ರಾತ್ರಿ ವೇಳೆ ಭೇಟಿ ನೀಡಿ ವ್ಯವಸ್ಥೆ ಗಮನಿಸದ್ದಕ್ಕೆ ಅಧಿಕಾರಿಗಳ ವಿರುದ್ಧ ಕಿಡಿಕಾರಿದರು.
ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯೊಂದಿಗೆ ಮಂಗಳವಾರ ಸಿಎಂ ಪರಿಶೀಲನಾ ಸಭೆಯಲ್ಲಿ ಸಿಎಂ ಗರಂ ಆಗಿದ್ದು, ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.