ನಿರಂತರ ಜೀವಬೆದರಿಕೆ ಕರೆಗಳು ಬರ್ತಿವೆ, ಪೊಲೀಸರಿಗೆ ದೂರು ನೀಡಿದ ನಟ ಪ್ರಥಮ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ನಟ ಪ್ರಥಮ್‌ಗೆ ಜೀವ ಬೆದರಿಕೆ ಕರೆಗಳು ಬರುತ್ತಿದ್ದು, ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಅಂಧಾಭಿಮಾನಿಗಳಿಂದ ನಿರಂತರ ಕರೆಗಳು ಮಾಡಿ ಬೆದರಿಕೆ ಹಾಕಲಾಗುತ್ತಿದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ದೂರು ನೀಡಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿಯೂ ಅವರು ಬರೆದುಕೊಂಡಿದ್ದಾರೆ.

ಜೀವನ ಬಹಳ ದೊಡ್ಡದು,ಯಾರಿಗೋಸ್ಕರವೋ ನೀವು ಅದನ್ನು ಹಾಳು ಮಾಡಿಕೊಳ್ಳಬೇಡಿ. ನಾನು ತುಂಬಾ ಶಾಂತಿಯಿಂದಲೇ ಇದ್ದೆ. ನೀವು ಅತಿಯಾಗಿ ನಮ್ಮ ʼಕರ್ನಾಟಕದ ಅಳಿಯʼ ತಂಡದ ಆಫೀಸ್‌ ಗೆ ಕಾಲ್ ಮಾಡಿ ಬೆದರಿಕೆ ಹಾಕುತ್ತಲೆ ಬಂದಿದ್ದೀರಾ. ಇನ್ಮೇಲೆ ನನಗೆ ಬರುವ ಕಾಲ್ ಮೆಸೇಜ್‌ ಅಥವಾ ಸೋಶಿಯಲ್‌ ಮೀಡಿಯಾ ವಾರ್ನಿಂಗ್ ಎಲ್ಲವೂ ಪೋಲೀಸರು ನೋಡಿಕೊಳ್ಳುತ್ತಾರೆ. ಬದುಕು ಸುಂದರವಾದದ್ದು, ಅಂಧಾಭಿಮಾನಿಗಳೇ ನಿಮ್ಮ ತಂದೆ ತಾಯಿಗಳಿಗೆ ಮೀಸಲಿಡಿ, ಯಾರಿಗೋಸ್ಕರವೋ ಹಾಳುಮಾಡಿಕೊಳ್ಳಬೇಡಿ ಕನ್ನಡಕ್ಕಾಗಿ, ಕಾವೇರಿಗಾಗಿ,ಸಂಸ್ಕೃತಿ ಉಳಿಸೋಕೆ ಬೇಕಾದ್ರೆ ಜೈಲಿಗೆ ಹೋಗಿ ಯಾರಿಗೋಸ್ಕರವೋ ಲೈಫ್ ಹಾಳುಮಾಡಿಕೊಳ್ಳಬೇಡಿ ಎಂದು ಬರೆದುಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!