ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ KSRTC ಬಸ್ ಟಿಕೆಟ್ ದರ ಹೆಚ್ಚಳ ಮಾಡುವ ಕುರಿತು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸುಳಿವು ನೀಡಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ತೈಲ ಬೆಲೆ ಏರಿಕೆಯಿಂದ ಬಸ್ ಟಿಕೆಟ್ ದರ ಹೆಚ್ಚಳ ಅನಿವಾರ್ಯವಾಗಿದೆ. 2020 ರಿಂದ ನಾವು ಬಸ್ ಟಿಕೆಟ್ ದರ ಹೆಚ್ಚಳ ಮಾಡಿಲ್ಲ.ಡೀಸೆಲ್ ದರ ಹೆಚ್ಚಳದ ಹಿನ್ನೆಲೆ ಟಿಕೆಟ್ ಬೆಲೆ ಹೆಚ್ಚಳಕ್ಕೆ ಚಿಂತನೆ ನಡೆಸಿದ್ದೇವೆ.ನಿಗಮಗಳಿಂದ ಬೆಲೆ ಹೆಚ್ಚಳದ ಬಗ್ಗೆ ಪ್ರಸ್ತಾವನೆ ಬಂದರೆ ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇವೆ ಎಂದು ಅವರು ಹೇಳಿದರು.