ಹೊಸದಿಗಂತ ವರದಿ, ಯಲ್ಲಾಪುರ:
ಕೇಂದ್ರ ಗ್ರಾಮೀಣಾಭಿವೃದ್ಧಿ ಮಂತ್ರಾಲಯ, ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಮಂತ್ರಾಲಯ ಇವರುಗಳ ಸಹಯೋಗದಲ್ಲಿ ಉತ್ತರ ಪ್ರದೇಶದ ವಾರಣಾಸಿಯಲ್ಲಿ ಪ್ರಧಾನ ಮಂತ್ರಿಯವರ ಜೊತೆಗೆ ನೈಸರ್ಗಿಕ ಕೃಷಿ ವಿಷಯದ ಕುರಿತು ಸಂವಾದ ನಡೆಸಿದ ಯಲ್ಲಾಪುರ ತಾಲೂಕಿನ ಜಂಬೇಸಾಲ ಗ್ರಾಮದ ಲತಾ ರಾಜೀವ ಹೆಗಡೆ ಅವರಿಗೆ ಸ್ವತಃ ಪ್ರಧಾನಿ ಮೋದಿಯವರು ಕರ್ನಾಟಕ ರಾಜ್ಯದ ಕೃಷಿ ಸಖಿ ಪ್ರಶಸ್ತಿ ನೀಡಿ ಗೌರವಿಸಿದರು.
ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಮತ್ತಿತರರು ಇದ್ದರು.