ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿಕ್ಕಮಗಳೂರಿನ ಭದ್ರಾ ನದಿಯ ಹಿನ್ನೀರಿನಲ್ಲಿ ತೆಪ್ಪ ಮಗುಚಿ ಮೂವರು ಪ್ರವಾಸಿಗರು ದುರ್ಮರಣ ಹೊಂದಿರುವ ಘಟನೆಎನ್.ಆರ್.ಪುರ ತಾಲೂಕಿನ ಬೈರಾಪುರ ಗ್ರಾಮದಲ್ಲಿ ಬುಧವಾರ ನಡೆದಿದೆ. ಮೂವರ ಶವಕ್ಕಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
ಶಿವಮೊಗ್ಗ ಜಿಲ್ಲೆಯ ವಿದ್ಯಾನಗರ ಮೂಲದ ಆದೀಲ್, ಸಾಜೀದ್ ಹಾಗೂ ಅಫ್ದಾಖಾನ್ ಮೃತ ದುರ್ದೈವಿಗಳು.
ಸ್ಥಳಕ್ಕೆ ವನ್ಯಜೀವಿ, ಪೊಲೀಸ್ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳ ಭೇಟಿ ನೀಡಿದ್ದು, ಮೂವರ ಶವಕ್ಕಾಗಿ ಪೊಲೀಸರ ಶೋಧ ಕಾರ್ಯ ನಡೆಯುತ್ತಿದೆ..