ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಹಾಗೂ ಇನ್ನಿತರ ಆರೋಪಿಗಳ ಪೊಲೀಸ್ ಕಸ್ಟಡಿ ಅವಧಿ ಇಂದು ಮುಕ್ತಾಯಗೊಳ್ಳಲಿದ್ದು, ಮುಂದೇನು ಎನ್ನುವ ಕುತೂಹಲ ರಾಜ್ಯದಲ್ಲಿ ಮನೆಮಾಡಿದೆ.
ಜೂನ್ 11ರಂದು ಆರೋಪಿಗಳನ್ನು ಬಂಧಿಸಲಾಗಿದ್ದು, ಈವರೆಗೆ ಪೊಲೀಸರು ವಿವಿಧ ರೀತಿಯಲ್ಲಿ ವಿಚಾರಣೆ ನಡೆಸಿ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಇಂದಿಗೆ 17 ಆರೋಪಿಗಳ ಪೊಲೀಸ್ ಕಸ್ಟಡಿ ಅಂತ್ಯವಾಗಲಿದೆ. ಹೀಗಾಗಿ, ಜೂನ್ 20ರ ಮಧ್ಯಾಹ್ನದ ನಂತರ ಆರೋಪಿಗಳನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ. ಇಂದು ಎಲ್ಲರ ಕಣ್ಣು ನ್ಯಾಯಾಲಯದ ಮೇಲಿದೆ.
ಇಂದು ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯದ ಎದುರು ಆರೋಪಿಗಳನ್ನು ಪೊಲೀಸರು ಹಾಜರುಪಡಿಸಲಿದ್ದು, ನ್ಯಾಯಾಂಗ ಬಂಧನ ಆಗಲಿದೆಯಾ ಇಲ್ಲವಾ ಕಾದುನೋಡಬೇಕಿದೆ.