ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ತಂಡದ ಮಾಜಿ ಕ್ರಿಕೆಟರ್ ಡೇವಿಡ್ ಜಾನ್ಸನ್(52) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇಂದು ಬೆಂಗಳೂರಿನ ಕೊತ್ತನೂರು ಬಳಿ ಇರುವ ಅಪಾರ್ಟ್ಮೆಂಟ್ನ ನಾಲ್ಕನೇ ಮಹಡಿಯಿಂದ ಕೆಳಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಡೇವಿಡ್ ಜಾನ್ಸನ್ ಅವರು ಅನಾರೋಗ್ಯ ನಿಮಿತ್ತ ಖಿನ್ನತೆಗೊಳಗಾಗಿದ್ದರು. ಈ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
1996ರಲ್ಲಿ ಭಾರತ ತಂಡದ ಪರ ಟೆಸ್ಟ್ ಪಂದ್ಯ ಆಡಿದ್ದ ಡೇವಿಡ್ ಜಾನ್ಸನ್, ಕೆಪಿಎಲ್ನಲ್ಲಿ ಬೆಳಗಾವಿ ಪ್ಯಾಂಥರ್ಸ್ ಪರ ಆಡಿದ್ದರು. ಸದ್ಯ ಸ್ಥಳಕ್ಕೆ ಕೊತ್ತನೂರು ಪೊಲೀಸರು ಭೇಟಿ ನೀಡಿ ಘಟನೆಯ ಸಂಬಂಧ ಹೆಚ್ಚಿನ ಮಾಹಿತಿಯನ್ನು ಕಲೆಹಾಕುತ್ತಿದ್ದಾರೆ. ಇನ್ನು ಡೇವಿಡ್ ಜಾನ್ಸನ್ ನಿಧನಕ್ಕೆ ಕ್ರಿಕೆಟ್ ವಲಯದಿಂದ ಸಂತಾಪಗಳು ವ್ಯಕ್ತವಾಗಿವೆ. ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ, ಹಿರಿಯ ಕ್ರಿಕೆಟಿಗ ಜಾನ್ಸನ್ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ.
Saddened to hear the passing of my cricketing colleague David Johnson. Heartfelt condolences to his family. Gone too soon “ Benny”!
— Anil Kumble (@anilkumble1074) June 20, 2024