ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಅಂತಾರಾಷ್ಟ್ರೀಯ ಯೋಗ ದಿನವಾಗಿದ್ದು, ಪ್ರಧಾನಿ ಮೋದಿ ಶ್ರೀನಗರದಲ್ಲಿ ಯೋಗದಿನ ಆಚರಣೆ ಮಾಡುತ್ತಿದ್ದಾರೆ.
ಯೋಗವು ಜ್ಞಾನ ಮಾತ್ರವಲ್ಲ ವಿಜ್ಞಾನವು ಕೂಡ ಆಗಿದೆ, ಇಂದು ಮಾಹಿತಿ ಸಂಪನ್ಮೂಲಗಳ ಪ್ರವಾಹವೇ ಇದೆ ಅಂತಹ ಪರಿಸ್ಥಿತಿಯಲ್ಲಿ ಒಂದು ವಿಷಯದ ಮೇಲೆ ಕೇಂದ್ರೀಕರಿಸುವುದು ಕಷ್ಟವಾಗುತ್ತಿದೆ, ಇದರ ಪರಿಹಾರವು ಯೋಗದಲ್ಲಿದೆ. ಯೋಗದ ಪ್ರಯಾಣ ಮುಂದುವರೆಯುತ್ತಿದೆ, ಇಂದು ಜಗತ್ತಿನಲ್ಲಿ ಯೋಗ ಮಾಡುವವರ ಸಂಖ್ಯೆ ನಿರಂತರವಾಗಿ ಹೆಚ್ಚಾಗುತ್ತಿದೆ ಎಂದಿದ್ದಾರೆ.
ಯೋಗಾಸನದಿಂದ ಮಾನಸಿಕ, ದೈಹಿಕ ಆರೋಗ್ಯ ವೃದ್ಧಿಯಾಗುತ್ತದೆ, ಯೋಗ ಇಂದು ಜಾಗತಿಕ ಮಟ್ಟದಲ್ಲಿ ಮನ್ನಣೆ ಗಳಿಸಿದೆ. ಯೋಗಾಭ್ಯಾಸದಿಂದ ಅನೇಕ ರೋಗಗಳಿಗೆ ಮುಕ್ತಿ ಸಿಗಲಿದೆ, ರೋಗಗಳು ಗುಣಮುಖವಾಗುವ ಬಗ್ಗೆ ವೈಜ್ಞಾನಿಕವಾಗಿ ದೃಢಪಟ್ಟಿದೆ ಎಂದು ಹೇಳಿದರು. ಆರೋಗ್ಯ ರಕ್ಷಣೆ, ಸಮಾಜ ಸ್ವಾಸ್ಥ್ಯ ಕಾಪಾಡಲು ಯೋಗ ಅತ್ಯಗತ್ಯ, ಯೋಗ ದಿನನಿತ್ಯದ ಜೀವನಕ್ಕೆ ಸಹಾಯಕವಾಗಲಿದೆ ಎಂದರು.
“World seeing new Yoga economy going forward”: PM Modi in Srinagar on 10th International Day of Yoga
Read @ANI Story | https://t.co/ej8bDY6XtF#PMModi #Yoga #Srinagar #10thInternationalDayofYoga pic.twitter.com/Ci29QmM6Cn
— ANI Digital (@ani_digital) June 21, 2024