ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಎಂ ಸಿದ್ದರಾಮಯ್ಯ ಅಧಿಕಾರ ಸಾಕಾಯ್ತು, ನಮ್ಮ ರಾಜ್ಯ ಬಳಲುತ್ತಿದೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿವೈ ವಿಜಯೇಂದ್ರ ಟೀಕಿಸಿದ್ದಾರೆ.
ರಾಜ್ಯದ ಹಣಕಾಸು ವ್ಯವಸ್ಥೆಯ ಮೇಲುಸ್ತುವಾರಿಗೆ ವಿದೇಶಿ ಕನ್ಸಲ್ಟೆನ್ಸಿ ನೇಮಕ ಕ್ರಮವನ್ನು ಸರಿಯಾಗಿಲ್ಲ.
ಸಿಎಂ ಸಿದ್ದರಾಮಯ್ಯನವರ ಸುತ್ತ ತಜ್ಞ ಅಧಿಕಾರಿಗಳು ಇದ್ದರೂ ವಿದೇಶಿ ಕನ್ಸಲ್ಟೆನ್ಸಿ ನೇಮಕ ಮಾಡಲಾಗಿದೆ. ಕಳೆದ 1 ವರ್ಷದಿಂದ ಸರ್ಕಾರ ಎಲ್ಲಾ ವಿಧದಲ್ಲೂ ವಿಫಲ ಆಗಿದೆ. ಒಂದು ವರ್ಷದಿಂದ ಯಾವುದೇ ಅಭಿವೃದ್ಧಿ ಇಲ್ಲ, ಹೂಡಿಕೆ ಬಂದಿಲ್ಲ. ಕರ್ನಾಟಕ ರಾಜ್ಯ ಸಿದ್ದರಾಮಯ್ಯ ನಾಯಕತ್ವದಲ್ಲಿ ಬಳಲುತ್ತಿದೆ ಎಂದು ಅವರು ಟೀಕಿಸಿದ್ದಾರೆ.