CINE | ಕೆಂಪೇಗೌಡರ ಪಾತ್ರದಲ್ಲಿ ಡಾಲಿ ಧನಂಜಯ, ಫಸ್ಟ್‌ ಲುಕ್‌ಗೆ ಫ್ಯಾನ್ಸ್‌ ಫಿದಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ನಾಡಪ್ರಭು ಕೆಂಪೇಗೌಡ ಸಿನಿಮಾ ಸೆಟ್ಟೇರಲು ಸಜ್ಜಾಗಿದ್ದು, ಡಾಲಿ ಧನಂಜಯ್ ನಾಡಪ್ರಭು ಕೆಂಪೇಗೌಡರ ಪಾತ್ರದಲ್ಲಿ ನಟಿಸಲಿದ್ದಾರೆ.

ಕೆಂಪೇಗೌಡರ ಕುರಿತಾಗಿ ಸಿನಿಮಾ ಮಾಡುವ ಪ್ರಯತ್ನ ಈ ಹಿಂದೆಯೂ ಆಗಿದ್ದು, ಆ ಸಿನಿಮಾದಲ್ಲಿ ದರ್ಶನ್ ನಟಿಸಬೇಕಾ? ಸುದೀಪ್ ನಟಿಸಬೇಕಾ? ಎಂಬ ಚರ್ಚೆಗಳು ಸಹ ನಡೆದಿದ್ದವು, ಆದರೆ ಈಗ ಡಾಲಿ ಧನಂಜಯ್ ಕೆಂಪೇಗೌಡರ ಪಾತ್ರದಲ್ಲಿ ಮಿಂಚಲಿದ್ದಾರೆ.

ಈಗಾಗಲೇ ಪೋಸ್ಟರ್ ಬಿಡುಗಡೆ ಆಗಿದ್ದು, ಗಿರಿಜಾ ಮೀಸೆ, ತಿಲಕ ಇಟ್ಟು, ಧನಂಜಯ್ ಖಡಕ್ ಆಗಿ ಕಾಣುತ್ತಿದ್ದಾರೆ. ಈ ಸಿನಿಮಾವನ್ನು ಹಿರಿಯ, ಅನುಭವಿ ನಿರ್ದೇಶಕ ಟಿಎಸ್ ನಾಗಾಭರಣ ನಿರ್ದೇಶನ ಮಾಡಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!