ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮತ್ತೆ ಮುಂಗಾರು ಚುರುಕಾಗಿದೆ. ಹೀಗಾಗಿ ಹಲವು ದಿನಗಳಿಂದ ಧಾರಾಕಾರ ಮಳೆಯಾಗುತ್ತಿದೆ. ನಗರದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದೆ.
ಕಾರ್ಪೊರೇಷನ್, ಮೆಜೆಸ್ಟಿಕ್, ಕೆಆರ್ ಸರ್ಕಲ್, ಶಾಂತಿನಗರ, ಮಡಿವಾಳ, ಪೀಣ್ಯ, ದಾಸರಹಳ್ಳಿ, ಬಾಗಲಗುಂಟೆ, ಶೆಟ್ಟಿಹಳ್ಳಿ, ಯಶವಂತಪುರ, ಮಲ್ಲಸಂದ್ರದ ಹಲವೆಡೆ ಭಾರಿ ಮಳೆಯಾಗಿದೆ. ಮಳೆಯಿಂದಾಗಿ ಹಲವೆಡೆ ಸಂಚಾರ ಸ್ಥಗಿತಗೊಂಡಿದ್ದು, ಚಾಲಕರು ಪರದಾಡುವಂತಾಯಿತು.
ಚಂಡಮಾರುತದಿಂದ ಕೇರಳ ಮತ್ತು ಕರ್ನಾಟಕದ ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಒಳ ಮತ್ತು ಪಕ್ಕದ ಪ್ರದೇಶಗಳಲ್ಲಿ ಭಾರೀ ಮಳೆಯಾಗಬಹುದು. ಇಂದಿನಿಂದ ಜೂನ್ 25 ರವರೆಗೆ ಗಾಳಿ ಸಹಿತ ಭೂಕುಸಿತ ಮತ್ತು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿದೆ.