ಹೊಸದಿಗಂತ ಬಳ್ಳಾರಿ:
ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ ನಡೆದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆಯಿಂದ ತೆರವಾದ, ಬಳ್ಳಾರಿ ಜಿಲ್ಲಾ ಉಸ್ತುವಾರಿಯನ್ನು ಸಚಿವ ಜಮೀರ್ ಅಹ್ಮದ್ ಖಾನ್ ಅವರಿಗೆ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ವಿಜಯನಗರದಲ್ಲಿ ಶುಕ್ರವಾರ ನಡೆದ ಜಿಲ್ಲಾ ಮಟ್ಟದ ಅಭಿವೃದ್ದಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಸಭೆ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಘೋಷಿಸಿದರು. ಅಭಿವೃದ್ಧಿ ವಿಚಾರದಲ್ಲಿ ಯಾವುದೇ ಕಾರಣಕ್ಕೂ ಯಾರೇ ನಿರ್ಲಕ್ಷ್ಯ ವಹಿಸಿದರೆ ಸಹಿಸೋಲ್ಲ, ನಮ್ಮ ಸರ್ಕಾರ ಜನಸ್ನೇಹಿಯಾಗಿರಬೇಕು ಎಂಬುದು ನನ್ನ ಬಯಕೆ, ಅದರಂತೆ ಉತ್ತಮ ಆಡಳಿತ ನೀಡುತ್ತಿರುವೆ ಎಂದಿದ್ದಾರೆ.