ಹೊಸದಿಗಂತ ಡಿಜಿಟಲ್ ಡೆಸ್ಕ್:
ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಆರೋಪದಡಿ ದೂರು ದಾಖಲಿಸಿರುವ ಸಂತ್ರಸ್ತ ಯುವಕನನ್ನು ಭಾನುವಾರ (ಇಂದು) ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗುವುದು.
ಪೊಲೀಸರು ಶನಿವಾರ ತಡರಾತ್ರಿ ಸಂತ್ರಸ್ತನನ್ನು ಹಾಸನದಿಂದ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಪರೀಕ್ಷೆಗೆ ವ್ಯವಸ್ಥೆ ಮಾಡಿದ್ದಾರೆ. ಹಾಸನದಲ್ಲಿ ವೈದ್ಯಕೀಯ ಪರೀಕ್ಷೆಗೆ ನಿರಾಕರಿಸಿದ ಸಂತ್ರಸ್ತನ ಮನವಿ ಮೇರೆಗೆ ಬೆಂಗಳೂರಿನಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದೆ.
ಇದೀಗ ಸಮಾಲೋಚನೆ ಮುಗಿಸಿರುವ ಕರ್ತವ್ಯದಲ್ಲಿರುವ ವೈದ್ಯರು ಹೆಚ್ಚಿನ ತಪಾಸಣೆಗಾಗಿ ಹಿರಿಯ ವೈದ್ಯರ ಬರುವಿಕೆಗಾಗಿ ಕಾಯುತ್ತಿದ್ದಾರೆ. ಇಂದು ಬೆಳಗ್ಗೆ 10 ಗಂಟೆಯ ನಂತರ ವೈದ್ಯಕೀಯ ಪರೀಕ್ಷೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.