ಹೊಸದಿಗಂತ ಡಿಜಿಟಲ್ ಡೆಸ್ಕ್:
ಸೂರಜ್ ರೇವಣ್ಣ ವಿರುದ್ಧ ಸಲಿಂಗ ಕಾಮ, ಅಸಹಜ ಲೈಂಗಿಕ ದೌರ್ಜನ್ಯದ ಆರೋಪದ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. ಈಗಾಗಲೇ ಬಂಧಿತರಾಗಿರುವ ಸೂರಜ್ ವಿರುದ್ಧದ ಅಸಾಮಾನ್ಯ ಅತ್ಯಾಚಾರ ಪ್ರಕರಣದ ತನಿಖೆಯನ್ನು ಕ್ರೈಂ ಬ್ರಾಂಚ್‌ಗೆ ವರ್ಗಾಯಿಸಿ ಕಾನೂನು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಆದೇಶಿಸಿದ್ದಾರೆ.
ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ವಿದಾನ ಪರಿಷತ್ ಸದಸ್ಯ ಸೂರಜ್ ರೇವಣ್ಣನ್ನು ಹಾಸನದ ಸೆನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕಲಂ 377 (ಅಸ್ವಾಭಾವಿಕ ಅಪರಾಧಗಳು), 342 (ಕಾನೂನುಬಾಹಿರ ಬಂಧನಕ್ಕೆ ಶಿಕ್ಷೆ) ಮತ್ತು 506 (ಬೆದರಿಕೆ), ಸಂತ್ರಸ್ತನ ದೂರನ್ನು ಶನಿವಾರ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ. ಸಂತ್ರಸ್ತ ಡಿಜಿಪಿ ಕಚೇರಿಗೆ ದೂರು ನೀಡಿದ್ದು, ಅದರ ಪ್ರತಿಯನ್ನು ಎಸ್ಪಿಗೆ ಕಳುಹಿಸಿದ್ದಾರೆ.