ಹೊಸದಿಗಂತ ಕಲಬುರಗಿ:
ಪೊಲೀಸ್ ಪೇದೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ನಗರದ ಹೊರವಲಯದ ಉದನೂರು ಬಳಿ ನಡೆದಿದೆ.
ಮಾಡಬೂಳ ಠಾಣೆಯ ಪೊಲೀಸ್ ಕಾನ್ಸಟೇಬಲ್ ದೊಡ್ಡೇಶ್ ಭಾರಿಗಿಡ (40) ನೇಣಿಗೆ ಶರಣಾದ ಪೊಲೀಸ್ ಕಾನ್ಸ್ಟೇಬಲ್ ಆಗಿದ್ದು, ನಗರದ ಉದನೂರು ರಸ್ತೆಯಲ್ಲಿರುವ ಜಮೀನಿನಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದೆ.
ನಗರದ ಹೈ ಕೋರ್ಟ್ ಬಳಿ ವಾಸವಾಗಿರುವ ದೊಡ್ಡೇಶ್ ಭಾರಿಗಿಡ ಅವರು ಮೂಲತಹಃ ಜೇವರ್ಗಿ ತಾಲೂಕಿನವಾರಗಿದ್ದರು. ಕೌಟುಂಬಿಕ ಕಲಹದ ಹಿನ್ನಲೆ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದ್ದು, ಈ ಕುರಿತು ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.