Monday, January 12, 2026
Monday, January 12, 2026
spot_img

ಪ್ರಯಾಣಿಕನಿಗೆ ಅಸ್ವಸ್ಥ: ವಿಜಯವಾಡಕ್ಕೆ ಹೋಗುತ್ತಿದ್ದ ವಿಮಾನ ಜೈಪುರದಲ್ಲಿ ತುರ್ತು ಭೂಸ್ಪರ್ಶ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೆಹಲಿಯಿಂದ ವಿಜಯವಾಡಕ್ಕೆ ಹೋಗುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ವ್ಯಕ್ತಿಯೊಬ್ಬರು ಅಸ್ವಸ್ಥರಾದ ಕಾರಣ ಚಿಕಿತ್ಸೆಗಾಗಿ ಜೈಪುರದಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು.

ಇಂದು ಬೆಳಗ್ಗೆ ದೆಹಲಿಯಿಂದ ಹೊರಟಿದ್ದ AI2517 ವಿಮಾನದಲ್ಲಿ ವಯಸ್ಸಾದ ಪ್ರಯಾಣಿಕರೊಬ್ಬರು ಅಸ್ವಸ್ಥರಾದರು. ನಂತರ ವಿಮಾನವನ್ನು ಜೈಪುರಕ್ಕೆ ತಿರುಗಿಸಲಾಯಿತು. ಅಲ್ಲಿ ಪ್ರಯಾಣಿಕರನ್ನು ಕೆಳಗಿಳಿಸಿ ಆಸ್ಪತ್ರೆಗೆ ಕರೆದೊಯ್ಯಲಾಯಿತು .

ತುರ್ತು ಭೂಸ್ಪರ್ಶದ ಬಗ್ಗೆ ಏರ್ ಇಂಡಿಯಾ ಸಂಸ್ಥೆ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.

Most Read

error: Content is protected !!