ಹೊಸದಿಗಂತ ಡಿಜಿಟಲ್ ಡೆಸ್ಕ್:
ಯುವಕನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣದ ಆರೋಪಿ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಅವರು ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ.
14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ಆದೇಶ ಹೊರಡಿಸಿದ ಬೆನ್ನಲ್ಲೇ ಅವರನ್ನು ಭಾನುವಾರ ರಾತ್ರಿ ಪರಪ್ಪನ ಅಗ್ರಹಾರಕ್ಕೆ ಕರೆದೊಯ್ಯಲಾಗಿದ್ದು, ಇಂದು ಸಿಐಡಿ ಕಸ್ಟಡಿಗೆ ಪಡೆಯುವ ಸಾಧ್ಯತೆಗಳಿವೆ.
ಪ್ರಕರಣದ ತನಿಖೆಯನ್ನು ಸರ್ಕಾರವು ಸಿಐಡಿಗೆ ವಹಿಸಿದ್ದು, ಇಂದು ಬಾಡಿ ವಾರಂಟ್ ಮೇಲೆ ತನಿಖಾಧಿಕಾರಿಗಳು ಸೂರಜ್ ಅವರನ್ನು ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ. ಭಾನುವಾರ ಜೈಲಿಗೆ ತಲುಪುವುದು ತಡವಾದ ಹಿನ್ನೆಲೆಯಲ್ಲಿ ಸೂರಜ್ ರೇವಣ್ಣಗೆ ಸೋಮವಾರ ಜೈಲಾಧಿಕಾರಿಗಳು ವಿಚಾರಣಾಧೀನ ಕೈದಿ ನಂಬರ್ ನೀಡಲಿದ್ದಾರೆ. ಇಂದು ಮಧ್ಯಾಹ್ನ ಅಥವಾ ಸಂಜೆ ವೇಳೆಗೆ ಸೂರಜ್ ಅವರನ್ನು ಸಿಐಡಿ ಅಧಿಕಾರಿಗಳು ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ.