ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಧಾನಸಭೆಯಿಂದ ವಿಧಾನ ಪರಿಷತ್ಗೆ ನೂತನವಾಗಿ ಆಯ್ಕೆಯಾದ 17 ಮಂದಿ ವಿಧಾನ ಪರಿಷತ್ ಸದಸ್ಯರು ಸೋಮವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ನೂತನ ಶಾಸಕರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಶಿಕ್ಷಕ ಮತ್ತು ಪದವೀಧರ ಕ್ಷೇತ್ರದಿಂದ ಆಯ್ಕೆಯಾದ 17 ಜನ ಪರಿಷತ್ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಪರಿಷತ್ ನೂತನ ಸದಸ್ಯನಾಗಿ ಪ್ರಮಾಣ ವಚನ ಸ್ವೀಕರಿಸಿದ ಸಿ.ಟಿ ರವಿ ಬಳಿಕ ಸಿಎಂ ಕಾಲಿಗೆ ನಮಸ್ಕರಿಸಿದರು. ಇದೇ ವೇಳೆ ನಗುಮೊಗದಿಂದಲೇ ಸಿ.ಟಿ ರವಿ ಬೆನ್ನು ತಟ್ಟಿ ಬೀಳ್ಕೊಟ್ಟರು. ಸಿ.ಟಿ ರವಿ ಪ್ರತಿಜ್ಞಾವಿಧಿ ಸ್ವೀಕಾರದ ವೇಳೆ ಅಭಿಮಾನಿಗಳು ಶಿಳ್ಳೆ ಚಪ್ಪಾಳೆ ಮಳೆಗರೆದರು. ಜೈ ಶ್ರೀರಾಮ್ ಘೋಷಣೆ ಕೂಗಿದರು.
ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಅವರು, ನೂತನ ಪರಿಷತ್ ಸದಸ್ಯರನ್ನ ಮಾತನಾಡಿಸಿ ಕುಶಲೋಪರಿ ವಿಚಾರಿಸಿದರು. ನಂತರ ನಡೆದ ಕಾರ್ಯಕ್ರಮದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ, ಕಾನೂನು ಸಚಿವ ಹೆಚ್.ಕೆ ಪಾಟೀಲ್ ವೇದಿಕೆಯಲ್ಲಿದ್ದರು.