ಹೊಸದಿಗಂತ ಡಿಜಿಟಲ್ ಡೆಸ್ಕ್:
ರೇಣುಕಾಸ್ವಾಮಿ ಕೊಲೆ ಮಾಡಿದ ಪ್ರಕರಣದಲ್ಲಿ ಜೈಲು ಸೇರಿದ್ದ ನಟ ದರ್ಶನ್ ಅಂಡ್ ಗ್ಯಾಂಗ್‌ನ 17 ಸದಸ್ಯರ ಪೈಕಿ ನಾಲ್ವರನ್ನು ತುಮಕೂರು ಜಿಲ್ಲಾ ಕಾರಾಗೃಹಕ್ಕೆ ವರ್ಗಾಯಿಸಲು ಕೋರ್ಟ್ ಅನುಮತಿ ನೀಡಿದೆ.
ಆರೋಪಿಗಳಾದ ಕಾರ್ತೀಕ್, ಕೇಶವ್ ಹಾಗೂ ನಿಖಿಲ್ ಸೇರಿದಂತೆ ಮತ್ತೊಬ್ಬ ಆರೋಪಿಯನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬೇರೆಡೆ ಸ್ಥಳಾಂತರ ಮಾಡುವಂತೆ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂರ್ ಪ್ರಸನ್ನ ಕುಮಾರ್ ಮನವಿ ಮಾಡಿದ್ದರು. ಇದನ್ನು ಪುರಸ್ಕರಿಸಿದ ನ್ಯಾಯಾಲಯವು ನಾಲ್ವರು ಆರೋಪಿಗಳನ್ನು ತುಮಕೂರು ಜಿಲ್ಲಾ ನ್ಯಾಯಾಲಯಕ್ಕೆ ವರ್ಗಾಯಿಸಲು ಅನುಮತಿ ನೀಡಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳು ಒಂದೇ ಕಡೆ ಇರುವುದು ಸುರಕ್ಷಿತವಲ್ಲ. ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಆರೋಪಿಗಳ ಜೈಲು ಬದಲಿಸುವುದು ಸೂಕ್ತವೆಂದು ಪೊಲೀಸರು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ದರ್ಶನ್ ಪರಪ್ಪನ ಅಗ್ರಹಾರ ಜೈಲು ಸೇರಿದ ದಿನವೆ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂರ್ ಪ್ರಸನ್ನ ಕುಮಾರ್ ಮನವಿ ಮಾಡಿದ್ದರು. ಆದರೆ, ಇದಕ್ಕೆ ದರ್ಶನ್ ಹಾಗೂ ಆತನ ಗ್ಯಾಂಗ್ ಪರ ವಕೀಲರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರಿಂದ ವಿಚಾರಣೆಯನ್ನು ಮುಂದೂಡಿಕೆ ಮಾಡಲಾಗಿತ್ತು. ಪುನಃ ಈ ಬಗ್ಗೆ ಸೋಮವಾರ ವಿಚಾರಣೆಗೆ ಕೈಗೆತ್ತಿಕೊಂಡ ವೇಳೆ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂರ್ ಪ್ರಸನ್ನ ಕುಮಾರ್ ಯಾಕೆ ಆರೋಪಿಗಳ ವರ್ಗಾವಣೆ ಅಗತ್ಯ ಎಂದು ವಿವರಿಸಿದ್ದಾರೆ. ಆನಂತರ, ನಾಲ್ವರು ಆರೋಪಿಗಳನ್ನು ಸ್ಥಳಾಂತರ ಮಾಡಲು ಅನುಮತಿ ನೀಡಲಾಗಿದೆ.
ರೇಣುಕಾಸ್ವಾಮಿ ಕೊಲೆ ಕೇಸಿನ ಆರೋಪಿಗಳಾದ ಎ8- ರವಿ, ಎ15-ಕಾರ್ತಿಕ್, ಎ16- ಕೇಶವ ಮೂರ್ತಿ ಎ17-ನಿಖಿಲ್ ನಾಯಕ್ ಅವರನ್ನು ತುಮಕೂರು ಜೈಲಿಗೆ ಶಿಫ್ಟ್ ಮಾಡಲಾಗುತ್ತಿದೆ. ಕೊಲೆ ಕೇಸಿನಲ್ಲಿ ಮೊದಲು ಕಾರ್ತೀಕ್, ಕೇಶವ್ ಹಾಗೂ ನಿಖಿಲ್ ಮೊದಲು ಪೊಲೀಸರ ಮುಂದೆ ಶರಣಾಗಿದ್ದರು. ಈ ಮೂವರು ಕೊಲೆ ಬಗ್ಗೆ ಸಂಪೂರ್ಣವಾಗಿ ಪೊಲೀಸರ ಮುಂದೆ ಬಾಯ್ಬಿಟ್ಟಿದ್ದರು. ಇವರು ಪೊಲೀಸರ ಮುಂದೆ ಬಾಯ್ಬಿಟ್ಟಿದ್ದರಿಂದ ನಟ ದರ್ಶನ್, ನಟಿ ಪವಿತ್ರಾಗೌಡ, ನಟ ಪ್ರದೂಷ್ ಸೇರಿ ಒಟ್ಟು 14 ಜನರು ಅರೆಸ್ಟ್ ಆಗಿದ್ದರು. ಈಗ ಕಾನೂನು ಸುವ್ಯವಸ್ಥೆ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರದಿಂದ ಬೇರೆ ಜೈಲಿಗೆ ಶಿಫ್ಟ್ ಮಾಡಲಾಗುತ್ತಿದೆ.