ಹೊಸದಿಗಂತ ಡಿಜಿಟಲ್ ಡೆಸ್ಕ್:
ಸ್ಯಾಂಡಲ್‌ವುಡ್ ಡ್ರಗ್ಸ್ ಪ್ರಕರಣದಲ್ಲಿ ನಟಿ ಸಂಜನಾ ಗಲ್ರಾನಿ ಹಾಗೂ ಶಿವಪ್ರಕಾಶ್ ಚಿಪ್ಪಿಗೆ ಬಿಗ್ ರಿಲೀಫ್ ಸಿಕ್ಕಿದೆ. ಇಬ್ಬರ ವಿರುದ್ದ ದಾಖಲಾಗಿದ್ದ ಎಫ್‌ಐಆರ್ ಅನ್ನು ಹೈಕೋರ್ಟ್ ರದ್ದುಗೊಳಿಸಿದೆ.
ಸಿಸಿಬಿಯಿಂದ (CCB) ನಟಿಯರು ಸೇರಿದಂತೆ ಡ್ರಗ್ ಪೆಡ್ಲರ್ ಗಳ ಬಂಧನವಾಗಿತ್ತು. ಎಫ್‌ಐಆರ್ (FIR) ರದ್ದು ಕೋರಿ ಸಂಜನಾ ಹಾಗೂ ಶಿವಪ್ರಕಾಶ್ ಹೈಕೋರ್ಟ್ ಮೆಟ್ಟಿಲೇರಿದ್ದರು.
ಈ ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್ (High Court) ಏಕಸದಸ್ಯ ಪೀಠ ಎಫ್‌ಐಆರ್ ರದ್ದುಗೊಳಿಸಿ ಆದೇಶಿಸಿದೆ.
ಮಾದಕ ಜಾಲಕ್ಕೆ ಸ್ಯಾಂಡಲ್‌ವುಡ್ ನಂಟಿದೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ 2020ರ ಸೆಪ್ಟೆಂಬರ್‌ನಲ್ಲಿ ಸಂಜನಾ ಗಲ್ರಾಣಿ ಮನೆಗೆ ದಾಳಿ ಮಾಡಿದ ಸಿಸಿಬಿ ಅಧಿಕಾರಿಗಳು ಮನೆ ಪರಿಶೀಲನೆ ನಡೆಸಿ ಬಂಧಿಸಿದ್ದರು.