ಹೊಸದಿಗಂತ ಡಿಜಿಟಲ್ ಡೆಸ್ಕ್:
ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ಸನಾತನ ಧರ್ಮ ನಿರ್ಮೂಲನೆ ಹೇಳಿಕೆಗೆ ಸಂಬಂಧಿಸಿದ ಪ್ರಕರಣದಲ್ಲಿ ಬೆಂಗಳೂರು ನ್ಯಾಯಾಲಯ ಇಂದು ಜಾಮೀನು ಮಂಜೂರು ಮಾಡಿದೆ.
ಇಂದು ಮುಂಜಾನೆ 42ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಮುಂದೆ ನೋಟಿಸ್ ಜಾರಿ ಮಾಡಿದ ನಂತರ ಉದಯನಿಧಿ ಸ್ಟಾಲಿನ್ ಹಾಜರಾಗಿದ್ದರು.
ಸನಾತನ ಧರ್ಮದ ಬಗ್ಗೆ ಹೇಳಿಕೆ ನೀಡಿದ್ದಕ್ಕಾಗಿ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ವಿರುದ್ಧ ಸಾಮಾಜಿಕ ಕಾರ್ಯಕರ್ತ ಪರಮೇಶ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ಮುಂದಿನ ವಿಚಾರಣೆ ಆಗಸ್ಟ್ 8ರಂದು ನಡೆಯಲಿದೆ.