ಹೊಸದಿಗಂತ ಡಿಜಿಟಲ್ ಡೆಸ್ಕ್:
ದಿನವೂ ಬಾಂಬ್ ಬೆದರಿಕೆ ಪ್ರಕರಣ ಹೆಚ್ಚಾಗ್ತಿದ್ದು, ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಬಾಂಬ್ ಥ್ರೆಟ್ ಬಂದಿದೆ. ಎರಡು ದಿನದ ಹಿಂದೆಯಷ್ಟೇ ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಹುಬ್ಬಳ್ಳಿ ವಿಮಾನ ನಿಲ್ದಾಣ ನಿರ್ದೇಶಕರಿಗೆ ವಿಮಾನ ನಿಲ್ದಾಣವನ್ನು ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್ ಬಂದಿದೆ.
ವಿಮಾನ ನಿಲ್ದಾಣ ನಿರ್ದೇಶಕ ರೂಪೇಶ್ ಕುಮಾರ್ಗೆ ಅನಾಮಧೇಯ ವ್ಯಕ್ತಿಯೊಬ್ಬನಿಂದ ಇ-ಮೇಲ್ ಮೂಲಕ ಜೀವಬೆದರಿಕೆ ಸಂದೇಶ ಬಂದಿದೆ. ಲಾಂಗ್ ಲೀವ್ ಪ್ಯಾಲೆಸ್ತೇನ್ ಎಂಬ ಹೆಸರಿನ ಮೇಲ್ ಐಡಿಯಿಂದ ನಿರ್ದೇಶಕರ ಕಚೇರಿಯ ಮೇಲ್ ಐಡಿಗೆ ಬೆದರಿಕೆ ಸಂದೇಶ ಬಂದಿದೆ. ನಾವು ನಿಮ್ಮನ್ನು ನಾಶ ಮಾಡುತ್ತೇವೆ. ನೀವು ಮಾಡಿದ ಎಲ್ಲ ಕೆಟ್ಟ ಕೆಲಸಗಳಿಗೆ ಉತ್ತರವಿಲ್ಲ ಎಂದು ಭಾವಿಸಿದ್ದೀರ. ಬೆಂಕಿಯಲ್ಲಿ ಎಸೆಯುತ್ತೇವೆ, ಉಸಿರುಗಟ್ಟಿ ಸಾಯುತ್ತೀರ ಎಂದು ಜೀವ ಬೆದರಿಕೆ ಹಾಕಿದ್ದಾರೆ. ಗೋಕುಲ ರೋಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.