ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಗ್ ಬಾಸ್ ಸೀಸನ್ 10ರ ಸ್ಪರ್ಧಿ ವರ್ತೂರ್ ಸಂತೋಷ್ ಎಲ್ಲರಿಗು ಚಿರಪರಿಚಿತ . ಬಿಗ್ಬಾಸ್ ಮನೆಯಲ್ಲಿದ್ದಾಗಲೇ ಹುಲಿ ಉಗುರು ಪ್ರಕರಣದಿಂದಾಗಿ ಜೈಲು ಪಾಲಾಗಿದ್ದ ವರ್ತೂರು ಸತೋಷ್ಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ. ಹಳ್ಳಿಕಾರ್ ರೇಸ್ ನಡೆಸಲು ಸಜ್ಜಾಗುತ್ತಿರುವ ಸಮಯದಲ್ಲಿ ಸಂಕಷ್ಟ ಎದುರಾಗಿದೆ.
ಪ್ರಾಣಿ ಸಾಗಾಟ ನಿಯಮವನ್ನು ಉಲ್ಲಂಘಿಸಿದ್ದಾರೆಂದು ವರ್ತೂರು ಸಂತೋಷ್ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರಾಣಿಗಳ ಸಾಗಾಣಿಕೆ ನಿಯಮ ಉಲ್ಲಂಘಿಸಿ ಅಸುರಕ್ಷಿತ ರೀತಿಯಿಂದ ಪ್ರಾಣಿಗಳನ್ನು ಸಾಗಾಟ ಮಾಡಿದ್ದಾರೆಂದು ಆರೋಪಿಸಿ ಪ್ರಾಣಿ ಕಲ್ಯಾಣ ಅಧಿಕಾರಿ ಹರೀಶ್ ಎಂಬುವರು ವರ್ತೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ವರ್ತೂರು ಸಂತೋಷ್ ಅನ್ನು ಪೊಲೀಸ್ ಠಾಣೆಗೆ ಕರೆಸಿ ವಿಚಾರಣೆ ಸಹ ಮಾಡಲಾಗಿದೆ ಎನ್ನಲಾಗುತ್ತಿದೆ.ರೇಸ್ ಮಾಡಲು ಮುಂದಾಗಿದ್ದ ವರ್ತೂರ್ ಒಂದರಲ್ಲಿ ಒಂಬತ್ತು ಹೋರಿಗಳನ್ನು ತುಂಬಿ ಸಾಗಾಟ ಮಾಡಿದ್ದರಂತೆ ಅಲ್ಲದೆ ಅದೇ ಟ್ರಕ್ನಲ್ಲಿ ಕೆಲವು ವಸ್ತುಗಳನ್ನು ಸಹ ತುಂಬಿಸಿದ್ದರಂತೆ. ಇದು ಪ್ರಾಣಿ ಸಾಗಾಟ ನಿಯಮಕ್ಕೆ ವಿರುದ್ಧವಾಗಿದೆ ಎಂದು ಆರೋಪಿಸಿ ಅಧಿಕಾರಿ ಹರೀಶ್ ವರ್ತೂರು ಸಂತೋಷ್ ವಿರುದ್ಧ ದೂರು ನೀಡಿದ್ದಾರೆ. ಈ ಕುರಿತು ನ್ಯಾಯಾಲಯದ ಮೆಟ್ಟಿಲೇರಲು ಸಹ ಹರೀಶ್ ಸಿದ್ಧವಾಗಿದ್ದಾರೆ ಎನ್ನಲಾಗುತ್ತಿದೆ.
ಹಳ್ಳಿಕಾರ್ʼ ವರ್ತೂರ್ ಸಂತೋಷ್ ಅವರು ʻಬಿಗ್ ಬಾಸ್ ಸೀಸನ್ ಹತ್ತರʼ 4ನೇ ರನ್ನರ್ ಅಪ್ ಆಗಿದ್ದರು. ಹೊರಗೆ ಬಂದ ಮೇಲೆ ರೇಸ್ ಮಾಡುವುದಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ. ವೇದಿಕೆ ಮೇಲೆ ವರ್ತೂರ್ ಅವರು ಕಿಚ್ಚ ಸುದೀಪ್ ಅವರಿಗೆ ರೇಸ್ಗೆ ಆಹ್ವಾನ ನೀಡಿದ್ದರು. ಸುದೀಪ್ ಕೂಡ ರೇಸ್ಗೆ ಬರುವುದಾಗಿ ಹೇಳಿದ್ದರು.