ಹೊಸದಿಗಂತ ಡಿಜಿಟಲ್ ಡೆಸ್ಕ್:
18 ನೇ ಲೋಕಸಭೆಯ ಅಧಿವೇಶನ ನಡೆಯುತ್ತಿದ್ದು, ಇಂದು ಲೋಕಸಭೆ ಸ್ಪೀಕರ್ ಆಗಿ ಓಂ ಬಿರ್ಲಾ ಆಯ್ಕೆಯಾದರು.
ಇದರ ನಡುವೆ ಗಮನ ಸೆಳೆದಿದ್ದು ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಮತ್ತು ಬಿಜೆಪಿ ಸಂಸದೆ ಕಂಗನಾ ರಣಾವತ್ . ಸಂಸತ್ ಭವನದ ಹೊರಗೆ ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಮತ್ತು ಬಿಜೆಪಿ ಸಂಸದೆ ಕಂಗನಾ ರಣಾವತ್ ಒಬ್ಬರಿಗೊಬ್ಬರು ಕೈ ಕುಲುಕಿ ಮಾತನಾಡಿದ್ದಾರೆ. ಇವರಿಬ್ಬರ ಸಂತೋಷದ ಕ್ಷಣ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಮತ್ತು ಬಿಜೆಪಿ ಸಂಸದೆ ಕಂಗನಾ ರಣಾವತ್ ಅವರು ಈ ಮುಂಚೆ ಒಟ್ಟಿಗೆ ತೆರೆ ಹಂಚಿಕೊಂಡಿದ್ದರು. 2011 ರಲ್ಲಿ, ಇಬ್ಬರು ಮಿಲೇ ನಾ ಮಿಲೇ ಹಮ್ ಚಿತ್ರದಲ್ಲಿ ನಟಿಸಿದ್ದರು. ಅಷ್ಟಾಗಿ ಸಿನಿಮಾ ಯಶಸ್ಸು ಕಂಡಿಲ್ಲ. ಆ ಬಳಿಕ ಕ್ರಮೇಣ ಚಿರಾಗ್ ಪಾಸ್ವಾನ್ ರಾಜಕೀಯಕ್ಕೆ ಎಂಟ್ರಿ ಕೊಟ್ಟರು. ಇದೀಗ ಮತ್ತೆ ಚಿರಾಗ್ ಪಾಸ್ವಾನ್ ಮತ್ತು ಬಿಜೆಪಿ ಸಂಸದೆ ಕಂಗನಾ ರಣಾವತ್ ಒಟ್ಟಿಗೆ ಕಂಡಿದ್ದಾರೆ. ಸಂಸತ್ತಿನ ಕೊಠಡಿಗಳಿಗೆ ತೆರಳುವ ಮೊದಲು ಉಭಯ ನಾಯಕರು ಖುಷಿ ಖುಷಿಯಾಗಿ ಮಾತನಾಡುತ್ತಾ ಪರಸ್ಪರ ಸಂಭಾಷಣೆಯಲ್ಲಿ ತೊಡಗಿದ್ದರು.