ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರು ಗುರುವಾರ (ಇಂದು) ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ ಏಮ್ಸ್ಗೆ ದಾಖಲಾಗಿದ್ದಾರೆ. ವೈದ್ಯರ ಪ್ರಕಾರ ಅವರು ಸ್ಥಿರವಾಗಿದ್ದು, ತೀವ್ರ ನಿಗಾದಲ್ಲಿದ್ದಾರೆ ಎಂದು ಮಾಹಿತಿ ಲಭಿಸಿದೆ.
ಎಲ್ಕೆ ಅಡ್ವಾಣಿ ಅವರು ನವದೆಹಲಿಯ ಏಮ್ಸ್ಗೆ ದಾಖಲಾಗಿದ್ದಾರೆ. ಅವರ ಸ್ಥಿತಿ ಸ್ಥಿರವಾಗಿದೆ ಮತ್ತು ಮೇಲ್ವಿಚಾರಣೆ ಮಾಡಲಾಗುತ್ತಿದೆ. ಅಡ್ವಾಣಿ ಅವರಿಗೆ ಈಗ 96 ವರ್ಷ. ಬುಧವಾರ ತಡರಾತ್ರಿ ಆಸ್ಪತ್ರೆಗೆ ಕರೆದೊಯ್ದಾಗ ಪ್ರಜ್ಞಾವಸ್ಥೆಯಲ್ಲಿದ್ದರು. ಆಸ್ಪತ್ರೆಯ ವೃದ್ಧಾಪ್ಯ ವಿಭಾಗದ ತಜ್ಞರು ಚಿಕಿತ್ಸೆ ನೀಡುತ್ತಿದ್ದಾರೆ. ಅವರು ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ ಎಂದು ಏಮ್ಸ್ ಹೇಳಿಕೆಯಲ್ಲಿ ತಿಳಿಸಿದೆ.