ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮಾನವೀಯ ಘಟನೆಯೊಂದರಲ್ಲಿ, ಮೇಘಾಲಯದ ವೆಸ್ಟ್ ಗಾರೋ ಹಿಲ್ಸ್ನಲ್ಲಿ ವಿವಾಹೇತರ ಸಂಬಂಧವಿದೆ ಎಂಬ ಶಂಕೆಯ ಮೇಲೆ ಗುಂಪೊಂದು ಮಹಿಳೆಯನ್ನು ಥಳಿಸಿದೆ.
ಮಹಿಳೆಯೊಬ್ಬಳ ಮೇಲೆ ಹಲ್ಲೆ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಾರ್ವಜನಿಕರ ಗುಂಪೊಂದು ಮಹಿಳೆಯನ್ನು ಥಳಿಸುತ್ತಿರುವ ವಿಡಿಯೋ ವೈರಲ್ ಆಗಿದೆ.
ಮಹಿಳೆ ಮೇಲೆ ಹಲ್ಲೆ ನಡೆಸಿದ ಐವರು ಆರೋಪಿಗಳನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ. ಪೊಲೀಸರ ಪ್ರಕಾರ, ಮಹಿಳೆ ವಿವಾಹೇತರ ಸಂಬಂಧ ಹೊಂದಿದ್ದಾಳೆ ಎಂದು ಆರೋಪಿಸಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ.