ಸ್ವಾಮೀಜಿಗಳೇ ಸ್ವಪ್ರೇರಣೆಯಿಂದ ಹೇಳಿದರೋ,ಡಿಕೆಶಿ ಹೇಳಿಸಿದರೋ: ಆರ್​ ಅಶೋಕ್

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಡಿಕೆ ಶಿವಕುಮಾರ್​ಗೆ ಸಿಎಂ ಸ್ಥಾನ ಬಿಟ್ಟುಕೊಡಿ ಎಂಬ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರಶ್ರೀ ಹೇಳಿಕೆ ವಿಚಾರವಾಗಿ ವಿಪಕ್ಷ ನಾಯಕ ಆರ್​ ಅಶೋಕ್ ಪ್ರತಿಕ್ರಿಯೆ ನೀಡಿದ್ದಾರೆ.

ಸ್ವಾಮೀಜಿಗಳೇ ಸ್ವಪ್ರೇರಣೆಯಿಂದ ಹೇಳಿದರೋ ಅಥವಾ ಡಿಕೆ ಶಿವಕುಮಾರ್ ಹೇಳಿಸಿದರೋ ಗೊತ್ತಿಲ್ಲ. ಸಿದ್ದರಾಮಯ್ಯ ಅವರಿಗೆ ರಾಜಕೀಯದ ಒಳಗೆ ಹೋಗಿ ತಿಳಿದುಕೊಳ್ಳುವ ಸಾಮರ್ಥ್ಯ ಇದೆ ಎಂದುಹೇಳಿದ್ದಾರೆ.

ಸರ್ಕಾರಿ ಕಾರ್ಯಕ್ರಮದಲ್ಲಿ ಈ ರೀತಿ ಎಂದು ಆಗಿರಲಿಲ್ಲ. ಮೊದಲ ಬಾರಿಗೆ ಸಿಎಂ ಎದುರಿಗೆ ನೀವು ರಾಜೀನಾಮೆ ನೀಡಿ ಎಂದಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಧರ್ಮಾರ್ಥನಾದರೆ ರಾಜೀನಾಮೆ ನೀಡಿ. ಇಷ್ಟು ಅವಮಾನ ಆಗಿಯೂ ಸಿಎಂ ಆಗಿ ಮುಂದುವರಿಯಬಾರದು ಎಂದು ಕಿಡಿಕಾರಿದ್ದಾರೆ.

ಸಿದ್ದರಾಮಯ್ಯ ತಂತ್ರಕ್ಕೆ ಇದೊಂದು ಪ್ರತಿತಂತ್ರ ಅಷ್ಟೇ. ಡಿಕೆ ಶಿವಕುಮಾರ್​ಗೆ ಅವರ ತಮ್ಮನ ಸೋಲನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ. ಮೂರು ಡಿಸಿಎಂಗಳಿಗೆ ಹಿನ್ನೆಲೆ ಗಾಯಕರೇ ಸಿದ್ದರಾಮಯ್ಯ. ಅದಕ್ಕೆ ಕೌಂಟರ್ ಆಗಿ ಧರ್ಮರಾಯ ಆದರೆ ಅಧಿಕಾರ ಬಿಟ್ಟುಕೊಡಬೇಕು ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!