ಹೊಸದಿಗಂತ ಡಿಜಿಟಲ್ ಡೆಸ್ಕ್:
ನಾಡಪ್ರಭು ಕೆಂಪೇಗೌಡ ಪಾರಂಪರಿಕ ತಾಣ ಅಭಿವೃದ್ಧಿ ಪ್ರಾಧಿಕಾರ, ಬಿಬಿಎಂಪಿ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಗುರುವಾರ ನಾಡಪ್ರಭು ಕೆಂಪೇಗೌಡರ 515 ನೇ ಜಯಂತಿ ಕಾರ್ಯಕ್ರಮವನ್ನು ಆಯೋಜಿಸಿದ್ದಾರೆ.
ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ, ಶ್ರೀ ಡಾ. ನಂಜಾವಧೂತ ಸ್ವಾಮೀಜಿ, ಜಗದ್ಗುರು ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ಸಂಪುಟದ ಸಚಿವರುಗಳು, ಶಾಸಕರುಗಳು, ವಿಧಾನ ಪರಿಷತ್ ಸದಸ್ಯರುಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.