ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ -1 ನಲ್ಲಿ ಛಾವಣಿ ಕುಸಿದ ನಂತರ ಹಲವಾರು ಕಾರುಗಳು ಸಂಪೂರ್ಣ ಜಖಂ ಆಗಿದೆ ಎಂದು ಅಗ್ನಿಶಾಮಕ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಾಹಿತಿ ಪಡೆದ ತಕ್ಷಣ ಮೂರು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ.
“ಬೆಳಿಗ್ಗೆ 5.30 ರ ಸುಮಾರಿಗೆ, ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ -1 ನಲ್ಲಿ ಮೇಲ್ಛಾವಣಿ ಕುಸಿತದ ಬಗ್ಗೆ ನಮಗೆ ಕರೆ ಬಂದಿತು. ಮೂರು ಅಗ್ನಿಶಾಮಕ ಇಂಜಿನ್ಗಳು ಸ್ಥಳಕ್ಕೆ ಧಾವಿಸಲಾಗಿದೆ” ಎಂದು ದೆಹಲಿ ಅಗ್ನಿಶಾಮಕ ಸೇವೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಕಿಂಜರಾಪು ಅವರು ಘಟನೆಯ ಬಗ್ಗೆ ವೈಯಕ್ತಿಕವಾಗಿ ನಿಗಾ ವಹಿಸುತ್ತಿದ್ದು, ರಕ್ಷಣಾ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ, ಗಾಯಗೊಂಡವರನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಹೇಳಿದ್ದಾರೆ.
ಇನ್ನು ಈ ಘಟನೆ ಕುರಿತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.