ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 1ರ ಮೇಲ್ಛಾವಣಿ ಕುಸಿದಿದ್ದು, ಒಬ್ಬರು ಮೃತಪಟ್ಟಿದ್ದಾರೆ.
ದೆಹಲಿಯಲ್ಲಿ ಭಾರೀ ಮಳೆ ಉಂಟಾಗಿದ್ದು, ಇಂದು ಬೆಳಿಗ್ಗೆ ಭಾರೀ ಮಳೆಯಿಂದ ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ -1 ರ ಮೇಲ್ಛಾವಣಿಯ ಒಂದು ಭಾಗವು ಕೆಳಗೆ ನಿಂತಿರುವ ಕಾರುಗಳ ಮೇಲೆ ಬಿದ್ದಿದೆ. ಇದರಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ.
ಅವಘಡದಲ್ಲಿ ಆರು ಮಂದಿ ಗಾಯಗೊಂಡಿದ್ದಾರೆ . ಟರ್ಮಿನಲ್ 1 ರಿಂದ ನಿರ್ಗಮನಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಇನ್ನು ಚೆಕ್-ಇನ್ ಕೌಂಟರ್ಗಳನ್ನು ಸುರಕ್ಷತಾ ಕ್ರಮಕ್ಕಾಗಿ ಮುಚ್ಚಲಾಗಿದೆ ಎಂದು ಎಂದು ದೆಹಲಿ ವಿಮಾನ ನಿಲ್ದಾಣದ ವಕ್ತಾರರು ತಿಳಿಸಿದ್ದಾರೆ.
ದೆಹಲಿ ವಿಮಾನ ನಿಲ್ದಾಣದ ಅಧಿಕೃತ ಹೇಳಿಕೆ ಪ್ರಕಾರ, ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ 1 ರ ಹಳೆಯ ನಿರ್ಗಮನದ ಮುಂಭಾಗದಲ್ಲಿರುವ ಮೇಲಾವರಣದ ಒಂದು ಭಾಗವು ಇಂದು ಬೆಳಿಗ್ಗೆ ಭಾರೀ ಮಳೆಯಿಂದಾಗಿ ಕುಸಿದಿದೆ ಎಂದು ಹೇಳಿದ್ದಾರೆ. ಇದರಿಂದ ಕೆಲವರಿಗೆ ಗಾಯಗಳು ಆಗಿದೆ. ಈಗಾಗಲೇ ಎಲ್ಲಾ ನೆರವು ಮತ್ತು ವೈದ್ಯಕೀಯ ನೆರವು ಒದಗಿಸಲು ತುರ್ತು ಸಿಬ್ಬಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಇನ್ನು ಟರ್ಮಿನಲ್ 1 ರಿಂದ ಎಲ್ಲಾ ನಿರ್ಗಮನಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಸುರಕ್ಷತಾ ಕ್ರಮವಾಗಿ ಚೆಕ್-ಇನ್ ಕೌಂಟರ್ಗಳನ್ನು ಮುಚ್ಚಲಾಗಿದೆ ಎಂದು ದೆಹಲಿ ವಿಮಾನ ನಿಲ್ದಾಣ ಸಿಬ್ಬಂದಿ ಹೇಳಿದ್ದಾರೆ.
Delhi: Rainwater accumulated on the temporary structure outside Terminal 1, leading to an accident pic.twitter.com/Q8WMNsvIZx
— IANS (@ians_india) June 28, 2024