ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಿಳಾ ಪ್ರೀಮಿಯರ್ ಲೀಗ್‌ನ 5ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬೌಲರ್‌ಗಳು ಅಕ್ಷರಶಃ ಅಬ್ಬರಿಸುತ್ತಿದ್ದಾರೆ. ಇಲ್ಲಿನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಯುಪಿ ವಾರಿಯರ್ಸ್ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಆರ್.ಸಿ.ಬಿ ನಿರ್ಧಾರ ಸರಿಯೆಂದು ಸಾಬೀತಾಗಿದೆ.
ಪಂದ್ಯದ ಎಂಟನೇ ಓವರ್‌ನಲ್ಲಿ ದಾಳಿಗಿಳಿದ ಕರ್ನಾಟಕದ ಪ್ರತಿಭೆ ಶ್ರೇಯಾಂಕ ಪಾಟೀಲ್ ಪಂದ್ಯದ ಚಿತ್ರಣವನ್ನೇ ಬದಲಿಸಿದರು. ಓವರ್‌ನ ಮೊದಲ ಎಸೆತದಲ್ಲೇ ಯುಪಿ ತಂಡದ ಅಪಾಯಕಾರಿ ಬ್ಯಾಟರ್ ಹಾಗೂ ನಾಯಕಿ ಮೆಗ್ ಲ್ಯಾನಿಂಗ್ ಅವರ ವಿಕೆಟ್ ಪಡೆದು ಸಂಚಲನ ಮೂಡಿಸಿದರು. ಈ ವಿಕೆಟ್ ಪಡೆಯುವಲ್ಲಿ ರಾಧಾ ಯಾದವ್ ಅವರ ಅದ್ಭುತ ಫೀಲ್ಡಿಂಗ್ ಪ್ರಮುಖ ಪಾತ್ರ ವಹಿಸಿತು.
ಲ್ಯಾನಿಂಗ್ ವಿಕೆಟ್ ಪತನದ ಬೆನ್ನಲ್ಲೇ ಯುಪಿ ತಂಡಕ್ಕೆ ಶ್ರೇಯಾಂಕ ಮತ್ತೊಂದು ಆಘಾತ ನೀಡಿದರು. ಅದೇ ಓವರ್‌ನ ಕೊನೆಯ ಎಸೆತದಲ್ಲಿ ಸ್ಫೋಟಕ ಬ್ಯಾಟರ್ ಫೋಬೆ ಲಿಚ್‌ಫೀಲ್ಡ್ ಅವರನ್ನು ಪೆವಿಲಿಯನ್‌ಗೆ ಅಟ್ಟುವ ಮೂಲಕ ಯುಪಿ ತಂಡದ ಬ್ಯಾಟಿಂಗ್ ಬೆನ್ನೆಲುಬನ್ನು ಮುರಿದರು. ಆರ್.ಸಿ.ಬಿ ಬೌಲರ್‌ಗಳ ಶಿಸ್ತುಬದ್ಧ ದಾಳಿಗೆ ಸಿಲುಕಿದ ಯುಪಿ ವಾರಿಯರ್ಸ್ ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.


