Monday, January 12, 2026
Monday, January 12, 2026
spot_img

ಶಬರಿಮಲೆ ಯಾತ್ರೆಗೆ ತೆರಳಿದ್ದ ವೃತಧಾರಿ ಎರಿಮಲೆಯಲ್ಲಿ ಹೃದಯಾಘಾತಕ್ಕೆ ಬಲಿ

ಹೊಸದಿಗಂತ ವರದಿ, ಉಳ್ಳಾಲ:

ಶಬರಿಮಲೆ ಯಾತ್ರೆ ಕೈಗೊಂಡಿದ್ದ ಉಳ್ಳಾಲ ತಾಲೂಕಿನ ಅಯ್ಯಪ್ಪ ಮಾಲಾ ವೃತಧಾರಿಯೋರ್ವರು ಕೇರಳದ ಎರಿಮಲೆಯಲ್ಲಿ ಹೃದಯಾಘಾತಕ್ಕೆ ಬಲಿಯಾದ ಘಟನೆ ಸೋಮವಾರ ಬೆಳಿಗ್ಗೆ ನಡೆದಿದೆ.

ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ದೇಲಂತಬೆಟ್ಟು ನಿವಾಸಿ ಉದ್ಯಮಿ ಚಂದ್ರಹಾಸ್ ಶೆಟ್ಟಿ (55) ಮೃತ ದುರ್ದೈವಿ.

ಚಂದ್ರಹಾಸ್ ಅವರು ಸಹಪಾಠಿ ಅಯ್ಯಪ್ಪ ಮಾಲಾ ವೃತಧಾರಿಗಳ ಜೊತೆ ಶನಿವಾರದಂದು ನಗರದ ಅರ್ಕುಳ ,ತುಪ್ಪೇಕಲ್ಲಿನಿಂದ ಶಬರಿಮಲೆ ಯಾತ್ರೆ ಕೈಗೊಂಡಿದ್ದರು.ಸೋಮವಾರ ಬೆಳಿಗ್ಗೆ ಚಂದ್ರಹಾಸ್ ಅವರು ಎರಿಮಲೆಯಿಂದ ಕಾಡಿನ ದಾರಿಯಾಗಿ ಪಂಪೆಗೆ ಪ್ರಯಾಣ ಬೆಳೆಸಿದ್ದ ವೇಳೆ ಕುಸಿದು ಬಿದ್ದು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

ಚಂದ್ರಹಾಸ್ ಅವರ ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ತ್ವರಿತವಾಗಿ ನಡೆಸಿ ಉಳ್ಳಾಲಕ್ಕೆ ತರಲು ಸ್ಪೀಕರ್ ಯು.ಟಿ.ಖಾದರ್ ಅವರು ಕೇರಳದ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದ್ದು,ಮಂಗಳವಾರ ಬೆಳಿಗ್ಗೆ ಪಾರ್ಥಿವ ಶರೀರವು ಉಳ್ಳಾಲ ತಲುಪಲಿದೆ.

ಮೃತ ಚಂದ್ರಹಾಸ್ ಅವರು ಮೂಲತ: ಬಾಕ್ರಬೈಲ್ ನಿವಾಸಿಯಾಗಿದ್ದು,ಪ್ರತಿಷ್ಟಿತ ಕಂಪನಿಯ ಮಿನರಲ್ ವಾಟರ್ ಪೂರೈಕೆಯ ಉದ್ಯಮ ನಡೆಸುತ್ತಿದ್ದರು.ಕಳೆದ ಹತ್ತು ವರುಷದ ಹಿಂದೆ ಪತ್ನಿಯ ಊರು ಪಿಲಾರಿನಲ್ಲೇ ಮನೆ ನಿರ್ಮಿಸಿ ವಾಸವಾಗಿದ್ದರು.ಇತ್ತೀಚಿಗಷ್ಟೆ ಪುತ್ರಿಯ ವಿವಾಹವನ್ನು ಅದ್ಧೂರಿಯಾಗಿ ನಡೆಸಿದ್ದರು.ಇದೀಗ ಚಂದ್ರಹಾಸ್ ಅವರು ಅಕಾಲಿಕವಾಗಿ ಸಾವನ್ನಪ್ಪಿರುವುದು ಕುಟುಂಬಸ್ಥರನ್ನು ಆಘಾತಕ್ಕೀಡು ಮಾಡಿದೆ.

ಮೃತರು ಪತ್ನಿ,ಪುತ್ರಿ,ಪುತ್ರನನ್ನ ಅಗಲಿದ್ದಾರೆ.

Most Read

error: Content is protected !!