ನೋಯ್ಡಾದಲ್ಲಿ ನಿರ್ಮಾಣ ಹಂತದ ಮನೆಯ ಗೋಡೆ ಕುಸಿತ: ಮೂವರು ಮಕ್ಕಳು ದಾರುಣ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶುಕ್ರವಾರ ದೆಹಲಿ-ಎನ್‌ಸಿಆರ್‌ನ ಪ್ರದೇಶಗಳಲ್ಲಿ ಭಾರೀ ಮಳೆಯ ನಂತರ, ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ದಾದ್ರಿ ಪ್ರದೇಶದಲ್ಲಿ ನಿರ್ಮಾಣ ಹಂತದ ಮನೆಯ ಗೋಡೆ ಕುಸಿದು ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ. ದಾದ್ರಿ ತಹಸಿಲ್ ವ್ಯಾಪ್ತಿಯ ಖೋಡ್ನಾ ಕಲಾನ್ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಪೋಲೀಸರ ಪ್ರಕಾರ, ನಿರ್ಮಾಣ ಹಂತದಲ್ಲಿರುವ ಮನೆಯ ಗೋಡೆಯ ಅವಶೇಷಗಳ ಅಡಿಯಲ್ಲಿ ಒಟ್ಟು ಎಂಟು ಮಕ್ಕಳು ಸಿಲುಕಿಕೊಂಡಿದ್ದರು, ಅದರಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದರು ಮತ್ತು ಉಳಿದವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.

ಸ್ಥಳದಲ್ಲಿ ಕಾರ್ಯಾಚರಣೆ ನಡೆಯುತ್ತಿದೆ ಎಂದು ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನೆಯ ಕುರಿತು ಮಾತನಾಡಿದ ಗೌತಮ್ ಬುದ್ಧ ನಗರದ ಹೆಚ್ಚುವರಿ ಜಿಲ್ಲಾಧಿಕಾರಿ ಅತುಲ್ ಕುಮಾರ್, ದಾದ್ರಿ ತಹಸಿಲ್ ವ್ಯಾಪ್ತಿಯ ಖೋಡ್ನಾ ಕಲನ್ ಗ್ರಾಮದಲ್ಲಿ ಶುಕ್ರವಾರ ನಿರ್ಮಾಣ ಹಂತದ ಮನೆಯ ಗೋಡೆ ಕುಸಿದು ಎಂಟು ಮಕ್ಕಳು ಸಾವನ್ನಪ್ಪಿದ್ದಾರೆ. ಉಳಿದ ಐವರು ಮಕ್ಕಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಘಟನೆಯ ಕುರಿತು ತನಿಖೆ ನಡೆಸಲಾಗುತ್ತಿದೆ ಸಂತ್ರಸ್ತರಿಗೆ ಪರಿಹಾರ ಒದಗಿಸಲಾಗಿದೆ.” ಎಂದು ಮಾಹಿತಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!