ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳದಲ್ಲಿ ಸೋಮವಾರ ಇಬ್ಬರು ನರ್ಸ್‌ಗಳಿಗೆ ನಿಪಾ ವೈರಸ್ ಪಾಸಿಟಿವ್ ದೃಢಪಟ್ಟಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.
ರಾಜ್ಯದ ಉತ್ತರ 24 ಪರಗಣ ಜಿಲ್ಲೆಯ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ(CCU) ಈ ಇಬ್ಬರು ನಿಪಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಉತ್ತರ 24 ಪರಗಣ ಜಿಲ್ಲಾ ಆರೋಗ್ಯ ಆಡಳಿತದ ಮೂಲಗಳ ಪ್ರಕಾರ, ಪೂರ್ವ ಬರ್ಧಮಾನ್ ಮತ್ತು ಪೂರ್ವ ಮಿಡ್ನಾಪುರ ಜಿಲ್ಲೆಯ 25 ಮತ್ತು 27 ವರ್ಷ ವಯಸ್ಸಿನ ಇಬ್ಬರು ರೋಗಿಗಳು ಜನವರಿ 6 ರಿಂದ CCU ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆರಂಭದಲ್ಲಿ, ತಲೆನೋವು, ಗಂಟಲು ನೋವು, ಪ್ರಜ್ಞಾಹೀನತೆ, ಸೆಳೆತ, ಜ್ವರದ ಲಕ್ಷಣಗಳು ಕಾಣಿಸಿಕೊಂಡಿದ್ದು, ಪೂರ್ವ ಬರ್ಧಮಾನ್ ಮತ್ತು ಪೂರ್ವ ಮಿಡ್ನಾಪುರ ಜಿಲ್ಲೆಗಳಲ್ಲಿರುವ ಸ್ಥಳೀಯ ರಾಜ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಜನವರಿ 6 ರಂದು, ಅವರ ಸ್ಥಿತಿ ಹದಗೆಟ್ಟ ನಂತರ ಅವರನ್ನು ಬರಾಸತ್‌ನಲ್ಲಿರುವ ಖಾಸಗಿ ಆಸ್ಪತ್ರೆಯ CCU ಗೆ ಸ್ಥಳಾಂತರಿಸಲಾಯಿತು ಎಂದು ಉತ್ತರ 24 ಪರಗಣ ಜಿಲ್ಲಾ ಆರೋಗ್ಯ ಆಡಳಿತದ ಮೂಲಗಳು ತಿಳಿಸಿವೆ.


