ಹೊಸದಿಗಂತ ಡಿಜಿಟಲ್ ಡೆಸ್ಕ್:
ಹರಿದ್ವಾರದಲ್ಲಿ ಸುರಿದ ಭಾರೀ ಮಳೆಗೆ ಸೂಖೀ ನದಿಯಲ್ಲಿ ಪ್ರವಾಹ ಉಂಟಾಗಿದ್ದು, ಹಲವು ಕಾರುಗಳು ಕೊಚ್ಚಿಹೋಗಿವೆ.
ಹಲವು ಮನೆಗಳಿಗೆ ಮಳೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತವಾಗಿದೆ. ಯಾತ್ರಾಸ್ಥಳಗಳ ರಸ್ತೆಗಳು ಜಲಾವೃತವಾಗಿವೆ.ಏಕಾಏಕಿ ಸುರಿದ ಮಳೆಯಿಂದಾಗಿ ನದಿಯು ತುಂಬಿ ಹರಿದು ಪ್ರವಾಹ ಸೃಷ್ಟಿಯಾದ ಕಾರಣ ಹಲವು ಕಾರುಗಳು ಕೊಚ್ಚಿಹೋಗಿವೆ.
ಗಂಗಾ ನದಿ ಮೇಲೆ ನಿರ್ಮಿಸಲಾದ ಸೇತುವೆ ಮೇಲೆ ನಿಂತು ಕಾರುಗಳು ಕೊಚ್ಚಿಹೋಗುತ್ತಿರುವ ದೃಶ್ಯವನ್ನು ಜನರು ತಮ್ಮ ಮೊಬೈಲ್‌ಗಳಲ್ಲಿ ಸೆರೆ ಹಿಡಿದಿದ್ದಾರೆ.
ವಿಡಿಯೋ ಎಲ್ಲಿದೆ..?