ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದ ತಂಡ ಸ್ಟಾರ್ ಆಲ್ರೌಂಡರ್ ರವೀಂದ್ರ ಜಡೇಜಾ ಟಿ 20 ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ.
ತಮ್ಮ ಅಧಿಕೃತ ಇನ್ಸ್ಟಾಗ್ರಾಮ್ ಹ್ಯಾಂಡಲ್ ಮೂಲಕ ಮಾಹಿತಿ ಹಂಚಿಕೊಂಡ ಅವರು, ‘ಕೃತಜ್ಞತೆ ತುಂಬಿದ ಹೃದಯದಿಂದ ನಾನು ಟಿ 20 ಅಂತಾರಾಷ್ಟ್ರೀಯ ಪಂದ್ಯಗಳಿಗೆ ವಿದಾಯ ಹೇಳುತ್ತಿದ್ದೇನೆ. ಹೆಮ್ಮೆಯಿಂದ ಓಡುವ ದೃಢವಾದ ಕುದುರೆಯಂತೆ ನಾನು ಯಾವಾಗಲೂ ನನ್ನ ದೇಶಕ್ಕಾಗಿ ನನ್ನ ಅತ್ಯುತ್ತಮವಾದುದ್ದನ್ನು ನೀಡಿದ್ದೇನೆ. ಕ್ರಿಕೆಟ್ನ ಇತರ ಸ್ವರೂಪಗಳಲ್ಲಿ ಆಟ ಮುಂದುವರಿಸುತ್ತೇನೆ. ಟಿ 20 ವಿಶ್ವಕಪ್ ಗೆಲ್ಲುವುದು ನನ್ನ ಕನಸು ನನಸಾಗಿತ್ತು. ಅದು ನನಸಾಗಿದೆ. ನನ್ನ ಟಿ 20 ಅಂತಾರಾಷ್ಟ್ರೀಯ ವೃತ್ತಿಜೀವನದ ಉತ್ತುಂಗವಾಗಿದೆ. ನೆನಪುಗಳು, ಅಚಲ ಬೆಂಬಲಕ್ಕಾಗಿ ಧನ್ಯವಾದಗಳು ಎಂದು ಅವರು ಬರೆದುಕೊಂಡಿದ್ದಾರೆ.
ಈ ಮೂಲಕ ತಂಡದಲ್ಲಿ ವಿದಾಯ ಹೇಳಿದ ಮೂರನೇ ಆಟಗಾರ ಎನಿಸಿಕೊಂಡಿದ್ದಾರೆ. ಅದಕ್ಕಿಂತ ಮೊದಲು ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ವಿದಾಯ ಹೇಳಿದ್ದರು. ಬಾರ್ಬಡೋಸ್ನ ಕೆನ್ಸಿಂಗ್ಟನ್ ಓವಲ್ನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟಿ 20 ವಿಶ್ವಕಪ್ ಟ್ರೋಫಿಯನ್ನು ಭಾರತ 7 ರನ್ಗಳಿಂದ ಗೆದ್ದುಕೊಂಡಿತು. ಐಸಿಸಿ ಪ್ರಶಸ್ತಿ ಗೆಲುವಿನ ನಂತರ ಭಾರತ ಸಂಭ್ರಮದಲ್ಲಿರುವಾಗ ಜಡೇಜಾ ಅವರು ವಿರಾಟ್ ಕೊಹ್ಲಿ ಮತ್ತು ಅವರ ನಾಯಕ ರೋಹಿತ್ ಶರ್ಮಾ ಅವರನ್ನು ಹಿಂಬಾಲಿಸಿದರು.
ಸ್ಪಿನ್-ಬೌಲಿಂಗ್ ಆಲ್ರೌಂಡರ್ ಎಂಎಸ್ ಧೋನಿ ನಾಯಕತ್ವದಲ್ಲಿ ತಂಡಕ್ಕೆ ಕಾಲಿಟ್ಟಿದ್ದರು. ಇತ್ತೀಚೆಗೆ ಮುಕ್ತಾಯಗೊಂಡ ಪಂದ್ಯಾವಳಿಯಲ್ಲಿ ಅವರು ಹೆಚ್ಚು ಪ್ರಭಾವಶಾಲಿ ಪ್ರದರ್ಶನ ನೀಡಿರಲಿಲ್ಲ. 2009ರಲ್ಲಿ ಶ್ರೀಲಂಕಾ ವಿರುದ್ಧ ಟಿ20 ಕ್ರಿಕೆಟ್ಗೆ ಪದಾರ್ಪಣೆ ಮಾಡಿದ ಅವರು 74 ಪಂದ್ಯಗಳನ್ನು ಆಡಿದ್ದು, 515 ರನ್ ಹಾಗೂ 54 ವಿಕೆಟ್ ಪಡೆದಿದ್ದಾರೆ.
ರವೀಂದ್ರ ಜಡೇಜಾ ಸಂಪೂರ್ಣ ತಂಡಕ್ಕೇ ಸ್ಪೂರ್ತಿ ಕೊಡುವ ಆಟಗಾರ.ತನ್ನ ಕ್ರಿಕೆಟ್ ಜೀವನದಲ್ಲಿ ಈತನ ಸಾಧನೆ ಅತ್ಯುತ್ತಮ ಹಂತದಲ್ಲಿದೆ.ಈತನೂ ಹಲವು ಬಾರಿ ತಂಡದ ಮ್ಯಾಚ್ ವಿನ್ನರ್ ಆಗಿರುವುದಿದೆ.